ಉದಯರಶ್ಮಿ ದಿನಪತ್ರಿಕೆ
ಚಡಚಣ: 23 ಆಗಸ್ಟ್ 2023 ರಂದು ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದ ಸವಿ ನೆನಪಿಗಾಗಿ ಭಾರತ ಸರ್ಕಾರವು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಅಧಿಕೃತವಾಗಿ ಘೋಷಿಸಿತು , ಈ ದಿನ ಭಾರತದ ಐತಿಹಾಸಿಕ ಸಾಧನೆಯನ್ನು ಸೂಚಿಸುತ್ತದೆ ಏಕೆಂದರೆ ಇದು ಚಂದ್ರನ ಮೇಲೆ ರೋವರ್ ಇಳಿಸಿದ ವಿಶ್ವದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವ ಪ್ರದೇಶದ ಬಳಿ ಇಳಿದ ಮೊದಲ ದೇಶವಾಗಿದೆ. ಇದು ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತದ ಬೆಳೆಯುತ್ತಿರುವ ಪರಾಕ್ರಮವನ್ನು ಸ್ಮರಿಸುತ್ತದೆ ಎಂದು ವಿಜ್ಞಾನ ವಿಭಾಗದ ಉಪನ್ಯಾಸಕಿ ಪ್ರೊ . ಅಶ್ವಿನಿ ಹೀರೆಮಠ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶದ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ.ಎಸ್.ಬಿ.ರಾಠೋಡ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತದ ಸಾಧನೆ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ, ಚಂದ್ರಯಾನ-3 ನಾವೀನ್ಯತೆ, ನಿಖರತೆ ಮತ್ತು ಪರಿಶ್ರಮಕ್ಕೆ ಉದಾಹರಣೆಯಾಗಿದೆ. ಇದಲ್ಲದೆ ಭಾರತದ ಮುಂಬರುವ ಪೀಳಿಗೆಗೆ ವಿಜ್ಞಾನ, ತಂತ್ರಜ್ಞಾನ, ಇಂಜೀನಿಯರಿಂಗ್ ಮತ್ತು ಗಣಿತ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಮತ್ತು ಭಾರತದ ಭವಿಷ್ಯದ ಬಾಹ್ಯಾಕಾಶ ಯಾತ್ರೆಗಳಿಗೆ ಕೊಡುಗೆ ನೀಡಲು ಪ್ರೇರೆಪಿಸಲು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತದೆ ಎಂದರು.
ಪಟ್ಟಣದ ಸಂಗಮೇಶ್ವರ ವಿಜ್ಞಾನ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯನ್ನು ಆ.23 ರಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದ ಇಸ್ರೋ ವೀಡಿಯೊಗಳನ್ನು ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಐ.ಕ್ಯೂ.ಎ.ಸಿ ಸಂಯೋಜಕ ಡಾ.ಎಸ್.ಎಸ್.ದೇಸಾಯಿ, ವಿಜ್ಞಾನ ವಿಭಾಗದ ಉಪನ್ಯಾಸಕಿ ಪ್ರೊ. ನೇಹಾ ಉಮರಾಣಿ, ಪ್ರೊ. ಸುರಜ ಪಾಟೀಲ, ಪ್ರೊ.ಸುಕನ್ಯಾ ನಗರೆ, ಪ್ರೊ. ಸುಸ್ಮಿತಾ ತಡಲಸೂರು, ಪ್ರೊ.ಭುವನೇಶ್ವರ, ಭರತ ಚಿಕ್ಕೂಡಿ, ಪ್ರೊ.ಬಸವರಾಜ ನೀಲವಾಣಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.