ಸಿಂದಗಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಭರವಸೆ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಉದ್ಯಾನಗಳನ್ನು ಹಂತ-ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು. ಜನರ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ವಾರ್ಡ್ ನಂ.೧೩ರಲ್ಲಿ ೨೦೨೫-೨೬ನೆಯ ಸಾಲಿನ ೧೫ನೆಯ ಹಣಕಾಸು, ಪುರಸಭೆ ನಿಧಿ ಹಾಗೂ ಎಸ್‌ಎಫ್‌ಸಿ ಯೋಜನೆಯಡಿಯಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡ ೩೧.೫೨ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಉದ್ಯಾನ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇತ್ತಿಚಗೆ ವಾರ್ಡ್ ನಂ.೧೩ಕ್ಕೆ ಭೇಟಿ ನೀಡಿ ಸಮಸ್ಯಗಳನ್ನು ಆಲಿಸ ಪರಿಹರಿಸುವುದಾಗಿ ಭರವಸೆ ನೀಡಿದ್ದು, ಆ ಪ್ರಕಾರವಾಗಿ ನಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ ಎಂದರು.
ಈ ವೇಳೆ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸಿಂದಗಿ ನಗರದ ಮಹಾಜನತೆ ಮನಗೂಳಿ ಅವರ ಮನೆತನಕ್ಕೆ ರಾಜಕೀಯ ಶಕ್ತಿಯಾಗಿ ನಿಂತಿದ್ದೀರಿ. ಸಿಂದಗಿ ನಗರದ ಸೌಂದರ್ಯೀಕರಣಕ್ಕೆ ಎಲ್ಲ ಪುರಸಭೆ ಸದಸ್ಯರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಪ್ರತಿ ವಾರ್ಡಿನ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಪುರಸಭೆ ನಾಮ ನಿರ್ದೇಶಿತ ಸದಸ್ಯ ಸಿದ್ದು ಮಲ್ಲೇದ, ಚನ್ನಪ್ಪ ಗೋಣಿ, ಸ್ಥಳೀಯ ನಿವಾಸಿ ಭೀಮು ಶ್ರೀಗಿರಿ, ಕಿರಣ ಕೋರಿ, ಜಯಶ್ರೀ ಹದನೂರ, ಸುನಂದಾ ಯಂಪುರೆ, ಅಜರ್ ನಾಟೀಕಾರ ಸೇರಿದಂತೆ ಇತರರು ಇದ್ದರು.