ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೈಸೂರು ವಿಶ್ವವಿದ್ಯಾಲಯದೊಂದಿಗೆ ಸಂಯೋಜನೆಗೊAಡಿರುವ ಮೈಸೂರಿನ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಮಾಸ್ಟರ್ ಆಫ್ ವಿಜ್ಯುಯಲ್ ಆರ್ಟ್ಸ್ (ಎಂ.ವಿ.ಎ) ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎರಡು ವರ್ಷದಲ್ಲಿನ ನಾಲ್ಕು ಸೆಮಿಸ್ಟರ್ ಪದವಿ ಇದಾಗಿದ್ದು, ಚಿತ್ರಕಲೆ ಹಾಗೂ ಶಿಲ್ಪಕಲೆ ವಿಭಾಗಗಳ ವಿಶೇಷ ಅಧ್ಯಯನಗಳಿರುತ್ತವೆ. ಆಸಕ್ತ ಅಭ್ಯರ್ಥಿಗಳು ಪ್ರವೇಶಾತಿಗಾಗಿ ದಿನಾಂಕ: ೩೦-೦೮-೨೦೨೫ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗಾಗಿ ಆಗಸ್ಟ್ ೩೦ರಂದು ನಡೆಯುವ ಅರ್ಹತೆ ಪರೀಕ್ಷೆಗೆ ಹಾಗೂ ವೈಯಕ್ತಿಕ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಕಚೇರಿ ದೂರವಾಣಿ ಸಂಖ್ಯೆ ೦೮೨೧-೨೪೩೮೯೩೧ಗೆ ಸಂಪರ್ಕಿಸಬಹುದಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.