Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವ ಸಂಸ್ಕ್ರತಿ ಸಾಮರಸ್ಯ-ಸಮಾನತೆ ಬದುಕಿಗೆ ನೆರವು
(ರಾಜ್ಯ ) ಜಿಲ್ಲೆ

ಬಸವ ಸಂಸ್ಕ್ರತಿ ಸಾಮರಸ್ಯ-ಸಮಾನತೆ ಬದುಕಿಗೆ ನೆರವು

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೆ.೧ ರಿಂದ ಅ.೧ ರವರೆಗೆ ನಾಡಿನ ಮಠಾಧಿಪತಿಗಳ ಒಕ್ಕೂಟದಿಂದ ಬಸವ ಸಂಸ್ಕ್ರತಿ ಅಭಿಯಾನ | ಸಚಿವ ಶಿವಾನಂದ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ೧೨ ನೇ ಶತಮಾನದ ಬಸವ ಸಂಸ್ಕ್ರತಿ ಅನನ್ಯವಾಗಿದೆ. ಒಂಬೈನೂರು ವರ್ಷಗಳಾದರೂ ಬಸವ ಸಂಸ್ಕ್ರತಿ ನಾಡಿನಲ್ಲಿ ಎಲ್ಲರೂ ಸಾಮರಸ್ಯ, ಸಮಾನತೆಯಿಂದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ದೇವಾಲಯದ ಸಿಬಿಎಸ್ಸಿ ಶಾಲಾ ಆವರಣದಲ್ಲಿನ ನಂದೀಶ್ವರ ರಂಗಮಂದಿರದಲ್ಲಿ ಭಾನುವಾರ ಸಂಜೆ ಶ್ರಾವಣ ಮಾಸದಂಗವಾಗಿ ಒಂದು ತಿಂಗಳ ಕಾಲ ಹಮ್ಮಿಕೊಂಡಿದ್ದ ಮೋಟಗಿಯ ಪ್ರಭು ಚನ್ನಬಸವ ಸ್ವಾಮೀಜಿಯವರ ಬಸವ ಸಂಸ್ಕ್ರತಿ ಪ್ರವಚನದ ಮಂಗಲ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಜಗತ್ತಿಗೆ ಕಾಯಕ, ದಾಸೋಹ, ಸಮಾನತೆ ತತ್ವ ನೀಡುವ ಮೂಲಕ ಎಲ್ಲರೂ ಜಾತ್ಯತೀತವಾಗಿ ಸಾಮರಸ್ಯದಿಂದ ಜೀವನ ಸಾಗಿಸಬೇಕೆಂಬ ಸಂದೇಶ ಸಾರಿದ್ದಾರೆ. ರಾಜ್ಯ ಸರ್ಕಾರ ಬಸವೇಶ್ವರರನ್ನು ರಾಜ್ಯದ ಸಾಂಸ್ಕ್ರತಿಕ ನಾಯಕ ಎಂದು ಘೋಷಣೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದೆ. ಬಸವೇಶ್ವರರು ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗುತ್ತಿದ್ದಾರೆ. ನಾಡಿನಲ್ಲಿ ಬಸವ ಸಂಸ್ಕ್ರತಿಯನ್ನು ಜಾಗೃತಿ ಮೂಡಿಸುವ ಸದುದ್ದೇಶದಿಂದ ಸೆ.೧ ರಿಂದ ಅ.೧ ರವರೆಗೆ ನಾಡಿನ ಮಠಾಧಿಪತಿಗಳ ಒಕ್ಕೂಟದಿಂದ ಬಸವ ಸಂಸ್ಕ್ರತಿ ಅಭಿಯಾನ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಂಡಿರುವುದು ಸ್ವಾಗತಾರ್ಹ. ಸೆ.೧ ರಂದು ಬಸವೇಶ್ವರ ಜನಿಸಿದ ಬಸವನಬಾಗೇವಾಡಿಯಿಂದ ಈ ಅಭಿಯಾನ ಚಾಲನೆಯಾಗಲಿದೆ. ಸೆ.೧ ರಂದು ಬಸವನಬಾಗೇವಾಡಿಯಲ್ಲಿ ನಡೆಯುವ ಬಸವ ಸಂಸ್ಕ್ರತಿ ಅಭಿಯಾನವು ಐತಿಹಾಸಿಕವಾಗಲಿದೆ. ಈ ಸಂದರ್ಭದಲ್ಲಿ ಶ್ರಾವಣ ಮಾಸದಲ್ಲಿ ಒಂದು ತಿಂಗಳ ಕಾಲ ಮೋಟಗಿಯ ಚನ್ನಬಸವ ಸ್ವಾಮೀಜಿಯವರು ಬಸವ ಸಂಸ್ಕ್ರತಿಯ ಕುರಿತು ಪ್ರವಚನ ಹೇಳುವ ಮೂಲಕ ಬಸವ ಸಂಸ್ಕ್ರತಿಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಿದ್ದಾರೆ. ಇದನ್ನು ಕೇಳಿದವರೆಲ್ಲರೂ ಪುನೀತರಾಗಿದ್ದಾರೆ. ಶ್ರೀಗಳ ಸುದೈವದಿಂದ ಬಸವ ಸಂಸ್ಕ್ರತಿಯ ಅಭಿಯಾನ ಇದೇ ನೆಲದಿಂದ ಚಾಲನೆ ಸಿಗುತ್ತಿದೆ ಎಂದರು.
ಪ್ರವಚನಕಾರ ಪ್ರಭು ಚನ್ನಬಸವ ಸ್ವಾಮೀಜಿ ಮಾತನಾಡಿ, ವಿಶ್ವಗುರು ಬಸವೇಶ್ವರರು ಜಗದ ನಂದಾದೀಪವಾಗಿದ್ದಾರೆ. ಇವರು ಮನುಕುಲದ ಸೂರ್ಯೋದಯ ಎಂದರು.
ಬಸವೇಶ್ವರ ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ರವಿ ರಾಠೋಡ, ಸಾನಿಧ್ಯ ವಹಿಸಿದ್ದ ಸಿದ್ದಲಿಂಗ ಸ್ವಾಮೀಜಿ, ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರ ಆಪ್ತಸಹಾಯಕ ರಾಜು ಇವಣಗಿ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ, ಸಮಿತಿ ಕಾರ್ಯದರ್ಶಿ ಬಸವರಾಜ ಗೊಳಸಂಗಿ, ಸಮಿತಿಯ ಸದಸ್ಯರಾದ ಅನಿಲ ಅಗರವಾಲ, ಮಹಾದೇವಿ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಜಾತ್ರಾ ಉತ್ಸವ ಸಮಿತಿಯ ಪದಾಧಿಕಾರಿಗಳಾದ ರಮೇಶ ಮಸಬಿನಾಳ, ಸಿದ್ರಾಮ ಪಾತ್ರೋಟಿ, ಮಹೇಶ ಹಿರೇಕುರಬರ, ಲಾಳೇಸಾ ಕೊರಬು, ನಂದೀಶ ಪಾಟೀಲ, ಮಂಜು ಜಾಲಗೇರಿ ಇತರರು ಇದ್ದರು.
ಶಂಕರಗೌಡ ಬಿರಾದಾರ ಪ್ರಾಸ್ತವಿಕವಾಗಿ ಮಾತನಾಡಿದರು. ಎಂ.ಬಿ.ತೋಟದ ಸ್ವಾಗತಿಸಿದರು. ಎಚ್.ಬಿ.ಬಾರಿಕಾಯಿ, ಕೊಟ್ರೇಶ ಹೆಗ್ಡಾಳ ನಿರೂಪಿಸಿದರು. ಎಂ.ಜಿ.ಆದಿಗೊಂಡ ವಂದಿಸಿದರು.
ಇದೇ ಸಂದರ್ಭದಲ್ಲಿ ಪ್ರವಚನಕಾರ ಪ್ರಭು ಚನ್ನಬಸವ ಸ್ವಾಮೀಜಿ ಅವರನ್ನು ಸೇರಿದಂತೆ ಜಾತ್ರೆಗೆ, ಪ್ರವಚನ ಕಾರ್ಯಕ್ರಮಕ್ಕೆ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.

“ಸೆ.೧ ರಂದು ನಡೆಯುವ ಕಾರ್ಯಕ್ರಮಕ್ಕೆ ದಾಸೋಹ, ಪೆಂಡಾಲ್ ವ್ಯವಸ್ಥೆಯ ಸೇವೆ ನಾನು ಮಾಡುತ್ತಿದ್ದು. ಕಾರ್ಯಕ್ರಮಕ್ಕೆ ಬರುವ ನಾಡಿನ ಅನೇಕ ಶ್ರೀಗಳ ವಾಸ್ತವ್ಯ, ಪ್ರಸಾದ ವ್ಯವಸ್ಥೆ ಇಲ್ಲಿನ ಜನರು ಅಚ್ಚುಕಟ್ಟಾಗಿ ಮಾಡಬೇಕಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ಜನರಿಗೆ ಗೌರವಾತಿಥ್ಯ ಸರಿಯಾಗಿ ನಡೆಯುವಂತೆ ಎಲ್ಲ ಜನರು ನೋಡಿಕೊಳ್ಳುವ ಜವಾಬ್ದಾರಿಯಿದೆ. ಈ ನಾಡಿನ ಬಸವ ಸಂಸ್ಕ್ರತಿಯನ್ನು ನಾಡಿಗೆ ತೋರಿಸುವ ಅವಕಾಶ ಸಿಕ್ಕಿದೆ. ಈ ಅಭಿಯಾನದ ಯಶಸ್ವಿಗೆ ನಾನು ನಿಮ್ಮೊಂದಿಗೆ ಸದಾ ಇರುವೆ.”

– ಶಿವಾನಂದ ಪಾಟೀಲ
ಸಚಿವರು

ಶೇ.೩೦ ರಷ್ಟು ಬೆಳೆಹಾನಿ

ಈಚೆಗೆ ರಾಜ್ಯದಲ್ಲಿ ವರುಣ ಕೃಪೆ ಸಾಕಷ್ಟು ಆಗಿದೆ. ಇದರಿಂದಾಗಿ ಅತಿವೃಷ್ಟಿಯಾದರೂ ಸಂಪೂರ್ಣ ಬೆಳೆ ಹಾನಿಯಾಗಿಲ್ಲ. ಶೇ.೩೦ ರಷ್ಟು ಬೆಳೆಹಾನಿಯಾಗಿರಬಹುದು. ಉಳಿದಂತೆ ಶೇ.೭೦ ರಷ್ಟು ಬೆಳೆಯ ಫಸಲು ಬರುವ ವಿಶ್ವಾಸವಿದೆ. ಭಗವಂತನು ಈ ವರ್ಷ ಉತ್ತಮ ಮಳೆ ನೀಡಿದ್ದರಿಂದ ಉತ್ತಮ ಬೆಳೆ ಬರುವ ವಿಶ್ವಾಸವಿದೆ ಎಂದು ಸಚಿವ ಶಿವಾನಂದ ಪಾಟೀಲ ನುಡಿದರು.

೧೧೦೦ ಮಹಿಳೆಯರ ತಲೆ ಮೇಲೆ ವಚನ ಗ್ರಂಥ

ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಸೆ.೧ ರಂದು ನಡೆಯುವ ಬಸವ ಸಂಸ್ಕ್ರತಿ ಅಭಿಯಾನಕ್ಕಾಗಿ ವಿಶಾಲವಾದ ವೇದಿಕೆ, ಪೆಂಡಾಲ್ ವ್ಯವಸ್ಥೆ, ಕಾರ್ಯಕ್ರಮಕ್ಕೆ ಬರುವ ಎಲ್ಲ ಜನರಿಗೂ ಪ್ರಸಾದ ವ್ಯವಸ್ಥೆಯನ್ನು ಸಚಿವರಿಂದ ನಡೆಯಲಿದೆ. ೧೧೦೦ ಮಹಿಳೆಯರು ವಚನ ಗ್ರಂಥ ತಲೆ ಮೇಲೆ ಹೊತ್ತು, ೭೭೦ ಜನರು ಕೈಯಲ್ಲಿ ಬಸವ ಧ್ವಜ ಹಿಡಿದು ಬಸವ ಸಂಸ್ಕ್ರತಿ ಅಭಿಯಾನದ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಬಸವೇಶ್ವರ ಸೇವಾ ಸಮಿತಿಯಿಂದ ಟೊಪ್ಪಿಗೆ ವಿತರಿಸಲಾಗುವದು. ಈ ಕಾರ್ಯಕ್ರಮದ ಯಶಸ್ವಿ ಮಾಡುವದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದನ್ನು ನ ಭೂತೋ ನ ಭವಿಷ್ಯತೋ ಅನ್ನುವ ರೀತಿಯಲ್ಲಿ ಮಾಡೋಣವೆಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.