Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಬ್ಬು ಬೆಳೆಗಾರರ ಹೋರಾಟಕ್ಕೆ ಜಯ: ಟನ್‌ಗೆ ₹3,600 ನೀಡಲು ಸಕ್ಕರೆ ಕಾರ್ಖಾನೆ ಒಪ್ಪಿಗೆ

ವಿದ್ಯುತ್ ಸ್ಪರ್ಶದಿಂದ ಕಬ್ಬಿನ ಗದ್ದೆಗೆ ಬೆಂಕಿ; 10 ಎಕರೆಗೂ ಅಧಿಕ ಬೆಳೆ ಭಸ್ಮ!

ಹಾಲುಮತದವರ ಭಂಡಾರದಲ್ಲಿ ಶಕ್ತಿ ಹಾಗೂ ಭಕ್ತಿ ಇದೆ :ಸಚಿವ ಎಂ.ಬಿ.ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ: ಪರೀಕ್ಷೆಗಳಿಗೆ ಭಯ ಬೇಡ
(ರಾಜ್ಯ ) ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ: ಪರೀಕ್ಷೆಗಳಿಗೆ ಭಯ ಬೇಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ ವಿದ್ಯಾರ್ಥಿಗಳಿಗೆ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಹೇಳಿದರು.
ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತಾ ನಡೆದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಬೇಕು. ಅದರಲ್ಲೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರ ಓದು ಅಗತ್ಯ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು.
ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಎಎಸ್, ಐಎಎಸ್‌ನಂತಹ ಪರೀಕ್ಷೆಗಳ ಪಠ್ಯ ಸಂಗ್ರಹಿಸಿಕೊಂಡು ಹಾಗೂ ಸರಿಯಾಗಿ ಗ್ರಹಿಸಿಕೊಂಡು ಅಭ್ಯಸಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆಗಳಿಗೆ ಭಯ ಪಡದೆ, ಓದಿರುವ ವಿಷಯವನ್ನು ಅರ್ಥೈಸಿಕೊಂಡು ಟಿಪ್ಪಣಿ ಮಾಡಿಟ್ಟುಕೊಳ್ಳಬೇಕು. ಪುನಃ ಅದೇ ವಿಷಯದ ಅಧ್ಯಯನ ಮಾಡಿದಾಗ ಈ ಹಿಂದೆ ಓದಿದ ವಿಷಯ ಬಗ್ಗೆ ಮನನವಾಗಲಿದೆ. ಓದಿದ ವಿಷಯವನ್ನು ವಿನಿಮಯ ಮಾಡಿಕೊಂಡಾಗ ವಿಷಯದ ಕುರಿತು ಜ್ಞಾನದ ಹರವು ವಿಸ್ತಾರಗೊಳ್ಳಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಈ ರೀತಿಯ ಕಾರ್ಯಾಗಾರಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾಗಿ ಸಹಾಯಕವಾಗಿವೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕಾಲೇಜು,ವಿವಿಧ ವಸತಿ ನಿಲಯಗಳಲ್ಲಿನ ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ್ ನಿಂಬರಗಿ ಅವರು ಮಾತನಾಡಿ, ಜೀವನದಲ್ಲಿ ಸಾಧನೆ ಮಾಡುವ ಛಲದೊಂದಿಗೆ ಅಧ್ಯನಶೀಲತೆ ರೂಢಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಪ್ರತಿನಿತ್ಯ ಅಧ್ಯಯನಕೈಗೊಳ್ಳಬೇಕು. ಆಯ್ಕೆಯ ವಿಷಯ ಕರಗತಗೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಅತ್ಯಂತ ಸಮರ್ಥವಾಗಿ ಎದುರಿಸಬಹುದಾಗಿದೆ. ಸಾಧಕರ ಪ್ರೇರಣೆಯಾಗಿಟ್ಟುಕೊಂಡು ನಿರಂತರ ಅಧ್ಯಯನ ಮಾಡಬೇಕು. ವಿಷಯಗಳ ಸಮಗ್ರವಾಗಿ ಅರಿತುಕೊಂಡು ಪರೀಕ್ಷೆಗಳನ್ನು ಎದುರಿಸಲು ಸನ್ನದ್ಧರಾಗಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೆಎಎಸ್, ಐಎಎಸ್ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಎಸ್ ಡಿ ವಿಜಡ್‌ಂನ ಸಂಸ್ಥಾಪಕ ಅಧ್ಯಕ್ಷರಾದ ಶರಣಯ್ಯ ಭಂಡಾರಿಮಠ ಅವರು ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ಕುರಿತಾಗಿ ಸಮಗ್ರ ವಿಷಯ ತಿಳಿಸಿಕೊಟ್ಟರು.
ವಿದ್ಯಾರ್ಥಿ ಪರಿಷತ್ ನ ರಾಜ್ಯಾಧ್ಯಕ್ಷರಾದ ಶ್ರೀನಾಥ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ್ ಪೋತದಾರ ಸ್ವಾಗತಿಸಿದರು, ಉಮೇಶ್ ಲಮಾಣಿ, ಮಂಜು ಹಿರೇಮನಿ, ಅರವಿಂದ್ ಲಂಬು, ಸದಾನಂದ ಬಡಿಗೇರ , ಮಾದೇಶ್ ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಬ್ಬು ಬೆಳೆಗಾರರ ಹೋರಾಟಕ್ಕೆ ಜಯ: ಟನ್‌ಗೆ ₹3,600 ನೀಡಲು ಸಕ್ಕರೆ ಕಾರ್ಖಾನೆ ಒಪ್ಪಿಗೆ

ವಿದ್ಯುತ್ ಸ್ಪರ್ಶದಿಂದ ಕಬ್ಬಿನ ಗದ್ದೆಗೆ ಬೆಂಕಿ; 10 ಎಕರೆಗೂ ಅಧಿಕ ಬೆಳೆ ಭಸ್ಮ!

ಹಾಲುಮತದವರ ಭಂಡಾರದಲ್ಲಿ ಶಕ್ತಿ ಹಾಗೂ ಭಕ್ತಿ ಇದೆ :ಸಚಿವ ಎಂ.ಬಿ.ಪಾಟೀಲ

ಸಂಕಷ್ಟದಲ್ಲಿದ್ದ ವೈದ್ಯಕೀಯ ಬಡ ವಿದ್ಯಾರ್ಥಿಗಳಿಗೆ ಸಚಿವ ಎಂ.ಬಿ.ಪಾಟೀಲ ನೆರವಿನ ಹಸ್ತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಬ್ಬು ಬೆಳೆಗಾರರ ಹೋರಾಟಕ್ಕೆ ಜಯ: ಟನ್‌ಗೆ ₹3,600 ನೀಡಲು ಸಕ್ಕರೆ ಕಾರ್ಖಾನೆ ಒಪ್ಪಿಗೆ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಸ್ಪರ್ಶದಿಂದ ಕಬ್ಬಿನ ಗದ್ದೆಗೆ ಬೆಂಕಿ; 10 ಎಕರೆಗೂ ಅಧಿಕ ಬೆಳೆ ಭಸ್ಮ!
    In (ರಾಜ್ಯ ) ಜಿಲ್ಲೆ
  • ಹಾಲುಮತದವರ ಭಂಡಾರದಲ್ಲಿ ಶಕ್ತಿ ಹಾಗೂ ಭಕ್ತಿ ಇದೆ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿದ್ದ ವೈದ್ಯಕೀಯ ಬಡ ವಿದ್ಯಾರ್ಥಿಗಳಿಗೆ ಸಚಿವ ಎಂ.ಬಿ.ಪಾಟೀಲ ನೆರವಿನ ಹಸ್ತ
    In (ರಾಜ್ಯ ) ಜಿಲ್ಲೆ
  • ಸರಕಾರಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಎಂ.ವೀ. ಫೌಂಡೇಶನ್‌ಗೆ ಗೌರವ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉಕ ಕಲಾವಿದರಿಗೆ ಚಿತ್ರರಂಗದಲ್ಲಿ ಅವಕಾಶ ಕಲ್ಪಿಸುವ ಉದ್ದೇಶ ನನ್ನದು
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 15,2026
    In ದಿನಪತ್ರಿಕೆ
  • ಮಕ್ಕಳ ಪ್ರತಿಭೆ ಅನಾವರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಪೋಷಕರ ಸಭೆಗಳ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.