ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಬಾಗಲಕೋಟ ಜಿಲ್ಲೆಯ ಬೀಳಗಿಯ ನಂದಿ ಅಂತರಾಷ್ಟ್ರೀಯ ಶಾಲೆಯಲ್ಲಿ ಭಾನುವಾರ ಆಯೋಜಿಸಿದ್ದ ೭ ನೇ ರಾಜ್ಯಮಟ್ಟದ ರೋಪ್ ಸ್ಕಿಪ್ಪಿಂಗ ಚಾಂಪಿಯನ್ಶೀಫ್ದಲ್ಲಿ ಸ್ಥಳೀಯ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದಡಿಯ ಬಸವೇಶ್ವರ ದೇವಾಲಯ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ವಿಭಾಗಗಳ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಭಾಗವಹಿಸಿದ್ದ ಒಟ್ಟು ವಿದ್ಯಾರ್ಥಿಗಳು ೧೦ ಚಿನ್ನದ ಪದಕ, ೪ ಬೆಳ್ಳಿ, ಒಂದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಮಹೇಶ ಸಂಗಮ, ವಿಜಯ ರಾಠೋಡ ಮಾರ್ಗದರ್ಶನ ನೀಡಿದ್ದಾರೆ. ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗುರುನಾಥ ದಡ್ಡೆ, ಶಾಲೆಯ ಸಲಹಾ ಸಮಿತಿ ಅಧ್ಯಕ್ಷ ಅನಿಲ ಅಗರವಾಲ, ಶಾಲಾ ಸಲಹಾ ಸಮಿತಿಯ ಎಲ್ಲ ಸದಸ್ಯರು, ಶಾಲಾ ಪ್ರಾಚಾರ್ಯೆ ಆರ್.ಎಂ.ರೋಣದ, ಉಪಪ್ರಾಚಾರ್ಯ ಎಸ್.ಎಂ.ಬಿಸ್ಟಗೊಂಡ, ಶಾಲಾ ಸಿಬ್ಬಂದಿ, ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.