ಮುದ್ದೇಬಿಹಾಳ: ಅ.೩ ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕುರುಬ ಸಮಾಜದ ಅಡಿಯಲ್ಲಿ ರಾಷ್ಟçಮಟ್ಟದ ಕುರುಬ ಸಮಾಜದ ಕಾರ್ಯಕಾರಿಣಿ ಸಭೆ ಹಾಗೂ ಮುಖ್ಯಮಂತ್ರಿ ಸಿದ್ರಾಮಯ್ಯನವರಿಗೆ ಅಭಿನಂದನಾ ಸಮಾರಂಭಕ್ಕೆ ಮತಕ್ಷೇತ್ರದಿಂದ ತೆರಳುತ್ತಿರುವ ಹಾಲುಮತ ಸಮಾಜ ಬಾಂಧವರಿಗೆ ವಾಹನಗಳ ವ್ಯವಸ್ಥೆ ಕಲ್ಪಿಸಿದ ಅಸ್ಕಿ ಪೌಂಡೇಷನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಪೋಸ್ಟರಗಳನ್ನು ಬಿಡುಗಡೆಗೊಳಿಸುವ ಮೂಲಕ ಸೋಮವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಹಾಲುಮತ ಸಮಾಜ ಹಾಲಿನಷ್ಟೇ ಪವಿತ್ರವಾಗಿದೆ. ಈ ರಾಜ್ಯದಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲಿ ಕುರುಬ ಸಮಾಜ ೧೦ರಿಂದ ೧೨ ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಆದರೆ ಜನಸಂಖ್ಯಾನುಗುಣವಾಗಿ ಸರಕಾರದ ಸೌಲಭ್ಯಗಳು ದೊರಕುವಂತಾಗಬೇಕು ಅಂದಾಗ ಮಾತ್ರ ಈ ಸಮಾಜದ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಮತ್ತು ರಾಜಕೀಯವಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದರು.
ಈ ವೇಳೆ ಕುರುಬ ಸಮಾಜದ ಮುಖಂಡ ಹಾಗೂ ಪಿಎಲ್ ಡಿ ಬ್ಯಾಂಕ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಸಮಾಜದ ಬಡವರಿಗೆ ಬೆಳಗಾವಿಯ ಕಾರ್ಯಕ್ರಮಕ್ಕೆ ಭಾಗವಹಿಸಲು ಸಿ.ಬಿ.ಅಸ್ಕಿಯವರು ಸೌಲಭ್ಯ ಕಲ್ಪಿಸಿದ್ದು ಸಮಾಜ ಅವರಿಗೆ ಋಣಿಯಾಗಿದೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬಿ.ಎಸ್.ಶಿರೋಳ, ಪಿ.ಕೆ.ಪಿ.ಎಸ್. ನಿರ್ದೇಶಕ ವೀರೇಶಗೌಡ ಅಸ್ಕಿ, ಮಾಜಿ ತಾಲೂಕ ಪಂಚಾಯತ ಸದಸ್ಯ ದ್ಯಾಮಣ್ಣ ಸೋಮನಾಳ ಸೇರಿದಂತೆ ಮತ್ತೀತರರು ಇದ್ದರು.
Related Posts
Add A Comment