ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ ೧೫ರಂದು ಕೊನೆಯ ದಿನವಾಗಿದೆ.
ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ ಆವರಣ, ದೂರವಾಣಿ ಸಂಖ್ಯೆ:೦೮೩೫೨-೭೯೬೦೬೦ ಅಥವಾ ವೆಬ್ ಸೈಟ್www.dwdsc.kar.nic.in UÉ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.