Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದಲ್ಲಿ ಗುರಿ ಮುಖ್ಯ, ಸಾಧನೆಗೆ ಪರಿಶ್ರಮ ಅಗತ್ಯ
(ರಾಜ್ಯ ) ಜಿಲ್ಲೆ

ಜೀವನದಲ್ಲಿ ಗುರಿ ಮುಖ್ಯ, ಸಾಧನೆಗೆ ಪರಿಶ್ರಮ ಅಗತ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ನೃತ್ಯಕಲಾ ತರಬೇತಿ ಶಿಬಿರಕ್ಕೆ ಚಾಲನೆ ನೀಡಿದ ಮಹಿಳಾ ವಿವಿ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜೀವನದಲ್ಲಿ ಗುರಿ ಮುಖ್ಯ, ನಿಗದಿಪಡಿಸಿಕೊಂಡ ಗುರಿಯೊಂದಿಗೆ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಪರಿಶ್ರಮ ಅಗತ್ಯ ಎಂದು ಮಹಿಳಾ ವಿಶ್ವ ವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರು ಹೇಳಿದರು.
ಸೋಮವಾರ ಪರ್ಲ್ಸ್ ಕ್ಯಾಂಪಸ್‌ನಲ್ಲಿರುವ ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಶಾಲಾ ವಿದ್ಯಾರ್ಥಿನಿಯರಿಗೆ ಆರು ತಿಂಗಳ ಕಾಲ ನೃತ್ಯಕಲಾ ತರಬೇತಿ ಶಿಬಿರದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿ, ಎಲ್ಲರಲ್ಲೂ ಅಗಾಧವಾದ ಶಕ್ತಿ ಇದೆ. ಸತತ ಅಧ್ಯಯನಶೀಲತೆ ಬೆಳೆಸಿಕೊಳ್ಳಬೇಕು. ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲೂ ಮುಂದಿದ್ದಾರೆ. ಈ ವಸತಿ ನಿಲಯದಿಂದ ಪ್ರತಿಭೆಗಳು ಹೊರಹೊಮ್ಮಿ ಕೀರ್ತಿ ತರುವಂತಾಗಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ಸಮಸ್ಯೆಗಳನ್ನು ನೀಗಿಸಿಕೊಂಡು ಸಾಧನೆ ಮಾಡಬೇಕು. ದಿನ ಪತ್ರಿಕೆಗಳನ್ನು ಪ್ರತಿನಿತ್ಯ ಓದುವುದನ್ನು ರೂಢಿಸಿಕೊಳ್ಳಬೇಕು ಜೀವನದಲ್ಲಿ ವಿವಿಧ ಉನ್ನತ ಹುದ್ದೆ ಹೊಂದಿ ಈ ವಸತಿ ನಿಲಯದ ಜಿಲ್ಲೆಯ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು.
ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನೇಕ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ವಿದ್ಯಾರ್ಥಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು.ನೃತ್ಯ ರೂಪಕ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜೆ ಇಂಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಸತಿ ನಿಲಯದ ಮೇಲ್ವಿಚಾಕರಾದ ಶ್ರೀಮತಿ ಎಸ್.ಎನ್. ಅಗಸಿಮುಂದಿನ, ತರಬೇತಿ ಗುರುಗಳಾದ ರೋಹಿಣಿ ತಳವಾರ, ಸುಭಾಶ್ಚಂದ್ರ ಕನ್ನೂರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ

ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ

ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ

ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಂದಿ ಸಕ್ಕರೆ ಕಾರ್ಖಾನೆಯಲ್ಲಿ ₹12.33 ಕೋಟಿ ಕಬ್ಬು ತೂಕ ವಂಚನೆ
    In (ರಾಜ್ಯ ) ಜಿಲ್ಲೆ
  • ಶಾಸಕ ಕಟಕಧೋಂಡ ಗೆ ಸಚಿವ ಸ್ಥಾನ ನೀಡಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಹೆಣ್ಣುಮಕ್ಕಳಿಗೆ ತೊಂದರೆ ನೀಡುವ ಪುಂಡರ ಮೇಲೆ ಕ್ರಮಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಸರ್ಕಾರ ಕೂಡಲೇ ಶಿಕ್ಷಣ ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಲಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ
    In (ರಾಜ್ಯ ) ಜಿಲ್ಲೆ
  • ಕಿತ್ತೂರ ರಾಣಿ ಚನ್ನಮ್ಮ ವಿವಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದರಿಗೆ ಅಧಿಕಾರಿಗಳಿಂದ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.