ಉದಯರಶ್ಮಿ ದಿನಪತ್ರಿಕೆ
ಆಲಮೇಲ: ತಾಲ್ಲೂಕಿನ ಸೋಮಜಾಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಮಲಘಾಣ ವಲಯದ ಸೋಮಜಾಳ ಕಾರ್ಯಕ್ಷೇತ್ರದ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಗುರುಗಳಾದ ಆರ್.ಎಸ್ ನೀರಲಗಿ ವಹಿಸಿದ್ದರು, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಂತೋಷ ಅಮರಗೊಂಡ ಮಾತನಾಡಿ, ಮಕ್ಕಳಿಗೆ ದುಶ್ಚಟಗಳಿಂದ ಆರೋಗ್ಯದ ಮೇಲೆ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ತಿಳಿಹೇಳುವ ಮೂಲಕ ಮಾದಕ ವಸ್ತುಗಳ ಬಳಕೆ ಮಾಡಬಾರದು ಹಾಗೂ ಪೌಷ್ಠಿಕ ಆಹಾರ ಸೇವನೆ ಮಾಡಬೇಕು ಇದರಿಂದ ಆರೋಗ್ಯ ಚೆನ್ನಾಗಿರುತ್ತದೆ, ಯೋಗ, ಧ್ಯಾನ ಪ್ರಾಣಾಯಾಮ ಮಾಡುವ ಹವ್ಯಾಸ ರೂಢಿಸಿಕೊಳ್ಳಿ ಎಂದರು.
ಶಿಕ್ಷಕ ಬಿ. ಎಸ್. ಅರಳಗುಂಡಗಿ ಮಾತನಾಡಿ ಯೋಜನೆಯ ಧ್ಯೇಯೋದ್ದೇಶಗಳ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಎಸ್. ಪಿ. ಕಲ್ಲೂರು, ಬಿ ಎಂ. ಕಡಲಗೊಂಡ, ಎನ್. ಎಸ್. ಬಿರಾದಾರ, ಬಿ. ಎಸ್. ಬಿರಾದಾರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಲಯ ಮೇಲ್ವಿಚಾರಕಿ ಸವಿತಾ ಪೂಜೇರಿ, ಯೋಜನೆಯ ಕಾರ್ಯ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಎಲ್ಲ ಶಿಕ್ಷಕ ವೃಂದದವರು ಮತ್ತು ಸಿ ಎಸ್ ಸಿ ಸೇವಾದಾರರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.