ವಿಜಯಪುರ ಬಂಜಾರಾ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾ ಗಣೇಶನ ಪ್ರತಿಷ್ಠಾಪನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಎಲ್ಲೆಡೆ ವಿಘ್ನ ವಿನಾಶಕ ಗಣೇಶನ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ. ಮನೆ ಮನೆಗಳಲ್ಲಿಯೂ ಗಣೇಶನ ಮೂರ್ತಿಗಳನ್ನು ಇಟ್ಟು ಜನರು ಭಕ್ತಿ ಭಾವದಿಂದ ಪೂಜೆ ಮಾಡುತ್ತಿದ್ದಾರೆ. ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಗಜಾನನ ಮೂರ್ತಿಗಳನ್ನು ಇಡಲು ಯುವ ಹೈಕಳು ಕುಣಿದು ಕುಪ್ಪಳಿಸಿ ಲಂಬೋಧರನನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಇಷ್ಟೆ ಅಲ್ಲ, ವಿವಿಧ ಶಾಲಾ ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ಸಂಘ ಸಂಸ್ಥೆಗಳಲ್ಲಿಯೂ ಗಣೇಶನ ಮೂರ್ತಿ ಇಟ್ಟು ಪೂಜೆ ಮಾಡಲಾಗುತ್ತಿದೆ.
ಹೀಗೆ ನಗರದ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ವರ್ಧಕ ಸಂಘದ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರದಂದು ಮಣ್ಣಿನ ‘ವಿದ್ಯಾಗಣಪತಿ’ಯನ್ನು ಪ್ರತಿಷ್ಠಾಪಿಸಲಾಯಿತು.
ಬೆಳಗಿನ ಜಾವ ವಿದ್ಯಾರ್ಥಿಗಳು ಆದರ್ಶ ನಗರದ ‘ಗಣಪತಿ ದೇವಾಸ್ಥಾನದಿಂದ ಮೆರವಣಿಗೆಯ ಮೂಲಕ ವಿವಿಧ ವಾದ್ಯ ವೈಭಗಳೊಂದಿಗೆ ಶಾಲಾ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು.
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಬಿ.ಪವಾರ ಮಾತನಾಡುತ್ತ, ವಿನಾಶ ಮತ್ತು ಪರಸ್ಪರ ಪ್ರೀತಿ, ವಿಶ್ವಾಸ, ವಾತ್ಸಲ್ಯದಿಂದ ಬೆರೆತು ಬಾಳಲು ಇಲ್ಲಿ ವಿವಿಧ ಚಟುವಟಿಕೆ ನಡೆಸಲಾಗಿದೆ. ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡರೆ ನಮ್ಮಲ್ಲಿನ ಪಾಪಗಳು ಕಳೆದು ದೀರ್ಘಾಯುಷ್ಯ, ಸಮೃದ್ಧಿ ಪ್ರಾಪ್ತಿಯಾಗುತ್ತದೆ ಎಂದರು.
ಈ ವೇಳೆಯಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಶಿಕ್ಷಕ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.