ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ನಿವಾಸಿ, ಭಾರತ ಸರ್ಕಾರದ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚನ್ನಬಸವ ಕೊಟಗಿಯವರಿಗೆ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ & ಆರ್ಟ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.
ಕೊಟಗಿಯವರು ಒಬ್ಬ ಕಲಾವಿದ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ, ಐತಿಹಾಸಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಪ್ರವಾಸಿಗರ ಮಾರ್ಗದರ್ಶಕರಾಗಿ, ಸಂಘಟಕರಾಗಿ, ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ, ಗಣ್ಯವ್ಯಕ್ತಿಗಳ ಆಪ್ತ ಸಹಾಯಕರಾಗಿ ಹತ್ತಾರು ಸೇವೆಗಳನ್ನು ಸಲ್ಲಿಸುತ್ತಾ, ವಿವಿಧ ಖಾಸಗಿ ಟಿ.ವಿ ಚಾನೆಲ್‌ಗಳು ಹಾಗೂ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಚಂದನ ವಾಹಿನಿಯಲ್ಲಿ ಕರ್ತವ್ಯದಲ್ಲಿರುವ ಇವರ ಸೇವೆಯನ್ನು ಗುರುತಿಸಿ ಹರಿಯಾಣ ರಾಜ್ಯದ ಫರಿದಾಬಾದ್‌ನ ಮ್ಯಾಜಿಕ್ & ಆರ್ಟ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.
ಸೆ೧೩ ರಂದು ಫರಿದಾಬಾದ್‌ನ ದಿ ಕ್ಯಾಸ್ಟಲ್ ಆಫ್ ಆರ್ಟ್ ಥಿಯೇಟರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಸದರಿ ವಿಶ್ವವಿದ್ಯಾಲಯದ ನಿರ್ದೇಶಕರು, ಡೀನ್, ರಿಜಿಸ್ಟಾçರ್ ಹಾಗೂ ಸಂಸ್ಥೆಯ ಸಂಪರ್ಕ ಅಧಿಕಾರಿ ಶ್ರೀಮತಿ ಆಶಾ ಅವರಿಗೆ ಚನ್ನಬಸವ ಕೊಟಗಿಯವರು ಕೃತಜ್ಞತೆ ಸಲ್ಲಿಸಿರುತ್ತಾರೆ. ಮತ್ತು ಕೊಟಗಿಯವರಿಗೆ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕರು, ಕಲಾವಿದರು, ಪತ್ರಕರ್ತರು, ಸಾಹಿತಿಗಳು, ಸಂಘ-ಸಂಸ್ಥೆಗಳು ಅಭಿನಂದನೆಗಳನ್ನು ಸಲ್ಲಿಸಿವೆ.