Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿಕೆಶಿ ಕ್ಷಮೆ ಕೇಳದೇ ಕಾಂಗ್ರೆಸ್ಗೆ ರಾಜೀನಾಮೆ ಬಿಸಾಕಬೇಕಿತ್ತು!
(ರಾಜ್ಯ ) ಜಿಲ್ಲೆ

ಡಿಕೆಶಿ ಕ್ಷಮೆ ಕೇಳದೇ ಕಾಂಗ್ರೆಸ್ಗೆ ರಾಜೀನಾಮೆ ಬಿಸಾಕಬೇಕಿತ್ತು!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿ ವಿವಾದಕ್ಕೀಡಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕ್ಷಮೆ ಕೇಳಬಾರದಿತ್ತು. ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಪ್ರಶ್ನಿಸಿದ್ದಾರೆ.
ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. “ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು. ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದಿದ್ದಾರೆ.
ಒಂದು ಕಡೆ ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ? ಎಂದು ಹೇಳಿದ್ದಾರೆ.
ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿಕೆ ಹರಿಪ್ರಸಾದ್ ಹೇಳಿದ್ದಕ್ಕೆ ಕ್ಷಮೆ ಕೇಳಿದರಾ? ಎಂದು ಟೀಕಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದಿದ್ದಾರೆ.
“He who loves not his country can love nothing”. ಅಂದರೆ “ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ” ಎನ್ನುವ ಮಾತಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ “ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು” ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ ಎಂದು ಆರೋಪಿಸಿದ್ದಾರೆ.

“ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿದ್ದೇನೆ. ವಿದ್ಯಾರ್ಥಿ ಸಂಘಟನೆಯಲ್ಲಿಂದಲೇ ಗುರುತಿಸಿಕೊಂಡು ಬಂದಿದ್ದೇನೆ. ಹೊಸದಾಗಿ ಕಾಂಗ್ರೆಸ್ ಸೇರಿಲ್ಲ, ಯಾರ ಪಾಠವೂ ಅಗತ್ಯವಿಲ್ಲ. ನನಗೂ ಗಾಂಧಿ ಕುಟುಂಬಕ್ಕೂ ಭಕ್ತ ಭಗವಂತನ ನಡುವಿರುವ ಸಂಬಂಧ. ನಾನು ಎಂಎ ಪೊಲಿಟಿಕಲ್ ವಿದ್ಯಾರ್ಥಿ.”

– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.