ಬಿ ಎಲ್ ಡಿ ಇ ನೂತನ ಕಲಾ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಪ್ರಾರಂಭೋತ್ಸವ
ಉದಯರಶ್ಮಿ ದಿನಪತ್ರಿಕೆ
ತಿಕೋಟ: ವಿದ್ಯಾರ್ಥಿಗಳಾದವರು ತಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಮುನ್ನುಗ್ಗಿದಾಗ ಮಾತ್ರ ಉತ್ತಮ ಸಾಧನೆ ಮಾಡಬಲ್ಲರು ಎಂದು ವಿಜಯಪುರ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಚಂದ್ರಕಾಂತ ಲೋಕರೆ ಅವರು ಹೇಳಿದರು.
ಪಟ್ಟಣದಲ್ಲಿರುವ ಬಿ ಎಲ್ ಡಿ ಇ ಸಂಸ್ಥೆಯ ನೂತನ ಕಲಾ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಬಿಎ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸದೊಂದಿಗೆ ಹೆಚ್ಚು ಹೆಚ್ಚು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕುವುದು ಅಗತ್ಯವಿದೆ. ವಿಶೇಷವಾಗಿ ಸಾಂಸ್ಕೃತಿಕವಾಗಿ ನೃತ್ಯ, ಸಂಗೀತ, ನಾಟಕ ಅಭಿನಯ ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾದರೆ ಪರಿಪೂರ್ಣ ಚಾರಿತ್ರ್ಯ ನಿರ್ಮಾಣ ಆದಂತಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ, ವಿದ್ಯಾರ್ಥಿಗಳು ಹೊಸ ವಿಚಾರಗಳ ಕಡೆ ಗಮನ ಹರಿಸಬೇಕೆಂದು ಸಲಹೆ ನೀಡಿದರು.
ಇದಕ್ಕೂ ಮುನ್ನ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ವಿಲಾಸ ಬಗಲಿ ಅವರು ಮಾತನಾಡಿ, ಕೇವಲ ಅಂಕ ಗಳಿಕೆಯೇ ದೊಡ್ಡ ಸಾಧನೆ ಅಲ್ಲ. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಧಿಸುವುದು ಅಷ್ಟೇ ಮುಖ್ಯವಾಗಿದೆ. ಯುವ ಜನತೆ ಸಂಸ್ಕಾರವಂತರಾಗಿ ಬೆಳೆಯುವುದು ತೀರಾ ಅಗತ್ಯವಾಗಿದೆ. ಜಂಕ್ ಫುಡ್ ಕಡೆ ಆಕರ್ಷಿತರಾಗದೇ ದೇಶಿ ಆಹಾರ ಪದ್ದತಿ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವತ್ತ ದಿಟ್ಟ ಹೆಜ್ಜೆ ಹಾಕಬೇಕಿದೆ ಎಂದರು.
ಈ ಮೊದಲು ಡಾ.ಸಂತೋಷ ನವಲಗುಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆಗಳು ನೆರವೇರಿಸಲಾಯಿತು. ಕು.ಲಕ್ಷ್ಮೀ ಅತಿಥಿಗಳ ಪರಿಚಯ ಮಾಡಿದರು.
ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ಜಾಧವ ಪ್ರಾರ್ಥಿಸಿದರು. ಕು. ಪವಿತ್ರಾ ನಡುವಿನಮನಿ ನಿರೂಪಿಸಿದರು. ಕು.ಅಕ್ಷತಾ ವಂದಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿ ಎಲ್ ಡಿ ಇ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ವಿಲಾಸ ಬಗಲಿ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರಾದ ಚಂದ್ರಕಾಂತ ಎಮ್.ಲೋಕರೆ, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಎಸ್.ತೋಳನೂರ ಅವರು ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ.ಬಿ.ಎಸ್.ಬೆಳಗಲಿ, ಕ್ರೀಡಾ ವಿಭಾಗದ ಮುಖ್ಯಸ್ಥ, ದೈಹಿಕ ಶಿಕ್ಷಣ ನಿರ್ದೇಶಕ ಬಿ.ಆರ್.ದೇಸಾಯಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಡಾ. ಸಂತೋಷ ನವಲಗುಂದ, ಜಿಮ್ಖಾನ್ ಅಧ್ಯಕ್ಷ ಡಾ.ಎಮ್.ಬಿ.ಹೂಗಾರ, ವಿದ್ಯಾರ್ಥಿ ಪ್ರತಿನಿಧಿಗಳಾದ ಕುಮಾರಿ ಪೃಥ್ವಿ ಕೆದರಾಪುರ, ಕು.ಅರವಿಂದ ಗೆಹ್ಲೋಟ್, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.