ಉದಯರಶ್ಮಿ ದಿನಪತ್ರಿಕೆ
ಚಡಚಣ: ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲಾ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಶಂಕರ ಹಾವಿನಾಳ ತಿಳಿಸಿದ್ದಾರೆ.
ವಿಜಯಪುರ ಜಿಲ್ಲಾ ಅತ್ಯುತ್ತಮ ಶಿಕ್ಷಕರತ್ನ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳು ಖಾಸಗಿ ಶಾಲೆಗಳಲ್ಲಿ ತಮ್ಮ ಸೇವೆ ಕಡ್ಡಾಯವಾಗಿರುವ ತಾಲೂಕಿಗೆ ಒಬ್ಬರಂತೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಬಯೋ ಡಾಟಾ, ತಾವು ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯ ಅಧ್ಯಕ್ಷರ ಶಿಫಾರಸು ಪತ್ರ ಹಾಗೂ ಇತ್ತೀಚಿನ ಒಂದು ಭಾವಚಿತ್ರ, ಈ ಮೊದಲು ಪಡೆದಿರುವ ಪ್ರಶಸ್ತಿಗಳ ವಿವರ ಹೊಂದಿರುವ ವಿವರವಾದ ಪತ್ರದೊಂದಿಗೆ ಸೆ.5 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಿದ ಅರ್ಜಿಗಳು ಸ್ವೀಕರಿಸಲಾಗುವುದು.
ಅಧ್ಯಕ್ಷರು/ಕಾರ್ಯದರ್ಶಿಗಳು, ಚಡಚಣ ತಾಲೂಕು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ ಚಡಚಣ. ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಒಂದಕ್ಕಿಂತ ಹೆಚ್ಚು ಅರ್ಜಿ ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಮೊ.ನಂ. : ೯೧೧೦೮೦೭೪೭೦, ೯೮೪೪೧೯೧೧೪೫, ೮೮೬೭೬೬೯೦೩೭ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.