Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ
(ರಾಜ್ಯ ) ಜಿಲ್ಲೆ

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಡಾ.ಆನಂದ.ಕೆ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೬ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ., ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ವಿಜೇತರಿಗೆ ಪ್ರಥಮ ೩ ಸಾವಿರ ರೂ. ದ್ವಿತೀಯ ೨ ಸಾವಿರ ರೂ. ಮತ್ತು ತೃತೀಯ ೧ ಸಾವಿರ ರೂ.ಬಹುಮಾನ ನೀಡಲಾಗುವುದು.
ಪ್ರೌಢ ಶಾಲಾ ವಿಭಾಗದಲ್ಲಿ: ಸ್ವಚ್ಚತೆಯ ಪಾಠ-ಗಾಂಧೀಜಿಯವರ ಸಂದೇಶ, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ ಹಾಗೂ ಗಾಂಧೀಜಿಯವರ ಸ್ವಾತಂತ್ರ‍್ಯದ ಕನಸು-ನನ್ನ ಕಲ್ಪನೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ೭೦೦ ರಿಂದ ೮೦೦ ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ:ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ,ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ ಹಾಗೂ ಬದಲಾವಣೆ ನನ್ನಿಂದಲೇ ಆರಂಭ – ಗಾಂಧೀಜಿಯವರ ಪಾಠ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ೯೦೦ ರಿಂದ ೧೦೦೦ ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ:ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ, (೨) ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ – ತತ್ವಗಳ ಹೋಲಿಕೆ ಹಾಗೂ ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ-ಯುವಕರಿಗೆ ಗಾಂಧೀಜಿಯವರ ಪಾಠ. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ೧೪೦೦ ರಿಂದ ೧೫೦೦ ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
. ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅಕ್ಟೋಬರ್ ೦೨ ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಆಯಾ ವಿಭಾಗದ ಪ್ರಥಮ ಬಹುಮಾನ ಪಡೆಯುವ ಪ್ರಬಂಧಗಳನ್ನು ರಾಜ್ಯ ಮಟ್ಟದ ಆಯ್ಕೆಗಾಗಿ ಕಳಿಸಲಾಗುವುದು.
ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಅಕರವಾಗಿ ಬಳಸಿದ ಪರಾಮರ್ಶನ ಹಾಗೂ ಅಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ, ಆಧಾರ ಗ್ರಂಥಗಳು ಹಾಗೂ ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.
ಜಿಲ್ಲೆಯ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ, ಎಲ್ಲ ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲ ಪದವಿ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವರು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ, ಅತ್ಯುತ್ತಮ ಪ್ರಬಂಧಗಳನ್ನು ಆಯ್ಕೆ ಮಾಡಿ ದಿನಾಂಕ:೧೨-೦೯-೨೦೨೫ರೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗೆ ಸಲ್ಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.