ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಇದೇ ಸೆಪ್ಟಂಬರ್ ೮ ರಿಂದ ೧೭ರವರೆಗೆ ನಗರದ ಇಂಡಿ ರಸ್ತೆಯಲ್ಲಿರುವ ಚಾಂದನಿ ಫಂಕ್ಷನ್ ಹಾಲ್‌ನಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.
ಸೆ.೮ರಂದು ಬೆಳಿಗ್ಗೆ ೧೧ ಗಂಟೆಗೆ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಮಳಿಗೆ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಬಸನಗೌಡ ತುರವಿಹಾಳ ಅವರು ಪ್ರಾತ್ಯಕ್ಷಿಕೆ ಉದ್ಘಾಟನೆ ಮಾಡಲಿದ್ದಾರೆ.