ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶೇ.೨೪.೧೦% ಹಾಗೂ ಶೇ.೭.೨೫% ಯೋಜನೆಯಡಿ ೨೦೨೫-೨೬ನೇ ಸಾಲಿಗೆ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಾರ್ಡ್ ನಂ.೦೪ ಹಂಚನಾಳ ತಾಂಡಾ ಪರಿಶಿಷ್ಟ ಜಾತಿ ಜನರಿಗೆ ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು ಹಾಗೂ ಶೇ.೭.೨೫% ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಹಾಗೂ ಇತರೆ ಕ್ರೀಡಾ ಪಟುಗಳಿಗೆ ಕ್ರೀಡಾ ಸಹಾಯ ಧನ ನೀಡುವ ಯೋಜನೆಯಾಗಿದೆ.
ಆಸಕ್ತ ಅರ್ಹ ಫಲಾನುಭವಿಗಳು ಪಾಲಿಕೆ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ ೩೦ರೊಳಗಾಗಿ ಪಾಲಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.