ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿಗೆ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರು ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ರಚಿಸಬೇಕಾಗಿದ್ದು, ಸಮಿತಿಯ ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಆಸಕ್ತರು ದಿನಾಂಕ : ೨೦-೦೯-೨೦೨೫ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.