ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿಗೆ ಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿ
ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕಿನ ಸಹಯೋಗದೊಂದಿಗೆ ಉದ್ಯಮಶೀಲತಾ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಪ್ರೇರಣಾ ಮ್ಯಕ್ರೋ ಕ್ರೆಡಿಟ್ ಯೋಜನೆಗಳಡಿ ಅರ್ಜಿಯನ್ನು ಆನಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಸೆಪ್ಟೆಂಬರ್ ೧೭ಕೊನೆಯ ದಿನವಾಗಿದೆ.
೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನಲ್ಲಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖಾ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.