ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ತಾಲ್ಲೂಕಿನ ತೆಲಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಗೃಹ ಆರೋಗ್ಯ ಯೋಜನೆಯ ಕಾರ್ಯಕ್ರಮ ವೈದ್ಯಾಧಿಕಾರಿ ಮಹಮ್ಮದ್ ಶಫಿ ಬಾಗವಾನ ಉದ್ಘಾಟಿಸಿದರು.
ತೆಲಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಹಮ್ಮದ್ ಶಫಿ ಬಾಗವಾನ ಮಾತನಾಡಿ, ಗೃಹ ಆರೋಗ್ಯ ಯೋಜನೆಯು ಕರ್ನಾಟಕ ಸರ್ಕಾರ ಪ್ರಾರಂಭಿಸಿದ ಆರೋಗ್ಯ ಉಪಕ್ರಮವಾಗಿದ್ದು, ಅಗತ್ಯ ಆರೋಗ್ಯ ಸೇವೆಗಳನ್ನು ನೇರವಾಗಿ ನಿವಾಸಿಗಳ ಮನೆ ಬಾಗಿಲಿಗೆ ಒದಗಿಸುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳ ಆರಂಭಿಕ ಪತ್ತೆ ಮತ್ತು ನಿರ್ವಹಣೆಯನ್ನು ಹೆಚ್ಚಿಸುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಮಧುಮೇಹ, ರಕ್ತದೊತ್ತಡ ಮತ್ತು ಅಧಿಕ ರಕ್ತದೊತ್ತಡದಂತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆಯಾಗಿದೆ ಎಂದ ಹೇಳಿದರು.
ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ಮಾತನಾಡ, ಕರ್ನಾಟಕದ ಗೃಹ ಆರೋಗ್ಯ ಯೋಜನೆಯ ಮುಖ್ಯ ಉದ್ದೇಶವೆಂದರೆ ರೋಗಗಳನ್ನು ಶೀಘ್ರವಾಗಿ ಪತ್ತೆಹಚ್ಚುವುದು. ಮತ್ತು ಮಧುಮೇಹ, ಅಧಿಕ ರಕ್ತದೊತ್ತಡ ವರದಿಗಳ ಪ್ರಕಾರ, ಕರ್ನಾಟಕದ ಶೇ. ೨೬.೯ ರಷ್ಟು ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಅಲ್ಲದೆ, ಜನಸಂಖ್ಯೆಯ ಶೇ. ೧೫.೬ ರಷ್ಟು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ.
ಅದಕ್ಕಾಗಿಯೇ ಕರ್ನಾಟಕ ರಾಜ್ಯ ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸಿತು. ಈ ಸಂಖ್ಯೆಗಳನ್ನು ಕಡಿಮೆ ಮಾಡಲು ಮತ್ತು ಎಲ್ಲರನ್ನೂ ಆರೋಗ್ಯವಾಗಿಡಲು ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದೆ ಸಂದರ್ಭದಲ್ಲಿ ತೆಲಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಸಮುದಾಯ ಆರೋಗ್ಯ ಅಧಿಕಾರಿ ರಾಜೇಶ್ ಬನ್ನಪ್ಪನವರ , ಅರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ ಪ್ಯಾತಿಗೌಡರ, ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿಗಳಾದ ಶಾರದಾ ಗಿಡಜಾಡರ, ಲಕ್ಷ್ಮಿ ಮಾಗಣಗೇರಿ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.