Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ

ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಬದ್ದ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಬದ್ದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕಟಿಬದ್ಧವಾಗಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಭರವಸೆ ನೀಡಿದರು.
ಇಲ್ಲಿಯ ಮಹಿಳಾ ವಿವಿಯ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ನಾತಕೋತ್ತರ ತರಗತಿಗಳ ಪ್ರವೇಶಾತಿ ಕೌನ್ಸಿಲಿಂಗ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಜ್ಞಾನಾರ್ಜನೆಗೆ ಬೇಕಾದ ಎಲ್ಲ ಬಗೆಯ ಅವಕಾಶಗಳನ್ನು ಮಹಿಳಾ ವಿವಿ ಸೃಷ್ಟಿಸುತ್ತದೆ ಎಂದರು.
ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅತ್ಯಾಧುನಿಕ ಬೋಧನಾ ತಂತ್ರಗಳು- ಸ್ಮಾರ್ಟಬೋರ್ಡ್ ಮತ್ತು ಡಿಜಿಟಲ್ ಕ್ಲಾಸ್‌ರೂಂ, ಮಲ್ಟಿಮೀಡಿಯಾ ಲ್ಯಾಬ್ ಮತ್ತು ಲಾಂಗ್ವೇಜ್ ಲ್ಯಾಬ್, ಸುಸಜ್ಜಿತ ಪ್ರಯೋಗಾಲಯಗಳು, ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ, ಸಾಪ್ಟವೇರ್ ಟೆಕ್ನಾಲಜಿ ಪಾರ್ಕ್, ೨೪x೭ ಇಂಟರ್‌ನೆಟ್ ಸೌಲಭ್ಯ, ಮಕ್ಕಳ ಲಾಲನೆ-ಪಾಲನೆಗೆ ಡೇಕೇರ್ ಸೆಂಟರ್, ನಗರದ ವಿವಿಧ ಭಾಗಗಳಿಂದ ವಿಶ್ವವಿದ್ಯಾಲಯಕ್ಕೆ ವಾಹನ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಒದಗಿಸಲಾಗಿದೆ ಎಂದು ಅವರು ವಿವರಿಸಿದರು.
ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳ ಹೆಬ್ಬಾಗಿಲನ್ನೇ ತೆರೆದಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಸಮಗ್ರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ. ಅದು ತನ್ನದೇ ಹಾದಿಯಲ್ಲಿ ಹೊಸ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಮಹಿಳಾ ಸಬಲೀಕರಣಕ್ಕಾಗಿ ಹತ್ತು ಹಲವು ವಿನೂತನ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿದೆ. ಮಹಿಳೆಯರ ಜ್ಞಾನ ಸಂಪಾದನೆ, ಸಂಸ್ಕೃತಿ, ಸಂಪನ್ನತೆಯನ್ನು ಹೆಚ್ಚಿಸಲು ನಿರಂತರವಾಗಿ ತುಡಿಯುತ್ತಿದೆ. ಅಷ್ಟೇ ಅಲ್ಲ, ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ಥಿಕ, ಸಾಮಾಜಿಕ ಉನ್ನತಿಗೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ. ಇದರ ಪ್ರಯೋಜನಗಳನ್ನು ವಿದ್ಯಾರ್ಥಿನಿಯರು ಪಡೆದುಕೊಳ್ಳಬೇಕು ಎಂದರು.
ಮಹಿಳಾ ವಿವಿಯ ಒಂದು ಕೋರ್ಸ್ಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ಆ ಕೋರ್ಸ್ನಲ್ಲಿ ಪ್ರವೇಶ ಸಿಗದಿದ್ದಾಗ ನಿರಾಶರಾಗಬೇಕಾಗಿಲ್ಲ. ಇದೇ ವಿವಿಯ ಇನ್ನೊಂದು ವಿಭಾಗದಲ್ಲಿ ಪ್ರವೇಶ ಪಡೆದುಕೊಂಡು ಅಧ್ಯಯನ ಮುಂದುವರೆಸಿದಲ್ಲಿ ಒಳ್ಳೆಯ ವೃತ್ತಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕುಲಸಚಿವ ಶಂಕರಗೌಡ ಸೋಮನಾಳ ಅವರು, ಮಹಿಳೆಯರು ಸುಲಭವಾಗಿ, ಆಕರ್ಷಕವಾಗಿ ಮತ್ತು ಕೈಗೆಟುಕುವ ದರದಲ್ಲಿ ಉನ್ನತ ಶಿಕ್ಷಣ ಪಡೆಯಲು ಸೂಕ್ತ ವಾತಾವರಣ ನಿರ್ಮಾಣ ಮಾಡುವಲ್ಲಿ ಮಹಿಳಾ ವಿಶ್ವವಿದ್ಯಾಲಯ ಹಲವಾರು ಕ್ರಮಗಳನ್ನು ಕೈಕೊಂಡಿದೆ ಎಂದರು.
ಸ್ನಾತಕೋತ್ತರ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿನಿಯರಿಗೆ ಹಲವಾರು ಉದ್ಯೋಗವಕಾಶಗಳು ಲಭ್ಯವಿದೆ ಎಂದು ಹೇಳಿದ ಅವರು. ಜ್ಞಾನ ಸಂಪಾದಿಸುವ ಆಸಕ್ತಿಯುಳ್ಳ ಮಹಿಳೆಯರು, ಉನ್ನತ ಶಿಕ್ಷಣವನ್ನು ಪಡೆಯುವ ಹಂಬಲ ಮತ್ತು ಬಲವನ್ನು ಹೊಂದಿದವರಿಗೆ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶಿಷ್ಟ ರೀತಿಯ ಪಠ್ಯಕ್ರಮವನ್ನು ರೂಪಿಸಲಾಗಿದೆ. ಇಲ್ಲಿನ ವಿದ್ಯಾರ್ಥಿನಿಯರು ತಾವು ಓದುತ್ತಿರುವ ಕೋರ್ಸ್ನ ವಿಷಯಗಳಲ್ಲದೇ ಇತರ ವಿಷಯಗಳಲ್ಲಿ ಒಂದೊAದು ವಿಷಯವನ್ನು ಓದುವ ಅವಕಾಶ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಸಕ್ಪಾಲ್ ಹೂವಣ್ಣ, ಪ್ರೊ.ರಮೇಶ ಕೆ, ಪ್ರೊ.ಆರ್.ವಿ.ಗಂಗಶೆಟ್ಟಿ, ಪ್ರೊ.ರಾಜು ಬಾಗಲಕೋಟೆ, ಪ್ರೊ.ಅನಿತಾ ನಾಟೀಕರ್, ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿ ಸಮಿತಿ ಅಧ್ಯಕ್ಷ ಪ್ರೊ.ಪಿ.ಜಿ.ತಡಸದ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಅಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿ, ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿನಿಯರು ಮತ್ತು ಪಾಲಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ

ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್

ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ

ಚಿಮ್ಮಡದಲ್ಲಿ ಕಳಸ, ಉತ್ಸವಮೂರ್ತಿಯ ಪುರ ಪ್ರವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಮಾನಸಿಕ & ದೈಹಿಕ ಸಾಮರ್ಥ್ಯ ವೃದ್ಧಿ :ಜೋಗೂರ
    In (ರಾಜ್ಯ ) ಜಿಲ್ಲೆ
  • ಬಾಲಿವುಡ್‌ನ ಸ್ಟಂಟ್ ಮಾಸ್ಟರ್ ಗೀತಾ ಟಂಡನ್
    In ವಿಶೇಷ ಲೇಖನ
  • ಓದುವ ಹವ್ಯಾಸದಿಂದ ಮಾನಸಿಕ ಆರೋಗ್ಯ ವೃದ್ಧಿ :ಡಾ.ಕುಶಾಲ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಕಳಸ, ಉತ್ಸವಮೂರ್ತಿಯ ಪುರ ಪ್ರವೇಶ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಬದ್ದ
    In (ರಾಜ್ಯ ) ಜಿಲ್ಲೆ
  • ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಧರಣಿ
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದಲ್ಲಿ ಹೊಸ ಹೊಸ ಪ್ರತಿಭೆಗಳು ಉದಯಿಸಲಿ
    In (ರಾಜ್ಯ ) ಜಿಲ್ಲೆ
  • ಅಗತ್ಯ ಆರೋಗ್ಯ ಸೇವೆಗಳು ನೇರ ನಿವಾಸಿಗಳ ಮನೆಗೆ :ಶಫಿ
    In (ರಾಜ್ಯ ) ಜಿಲ್ಲೆ
  • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.