ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಮನವಿ
ವಿಜಯಪುರ: ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು, ಕಾರ್ಮಿಕರ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವಂತೆ ಅವರಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸುವ ಅಗತ್ಯವಿದೆ. ಅದನ್ನು ತಾವು ಮೊದಲ ಆದ್ಯತೆಯ ಮೇರೆಗೆ ಅಂತಹ ಮಕ್ಕಳಿಗೆ ವಿಶೇಷ ಸೌಲಭ್ಯ ಕಲ್ಪಿಸುವಂತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ವಿನಂತಿಸಿಕೊಂಡರು.
ಮಂಗಳವಾರ ನಗರದಲ್ಲಿರುವ ಪಕ್ಷದ ಕಾರ್ಯಾಲಯಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್ ಅವರನ್ನು
ಪಕ್ಷದ ಪರವಾಗಿ ಸನ್ಮಾನಿಸಿ ಅವರು ಮಾತನಾಡಿದರು.
ಕಾರ್ಮಿಕರ ಮಕ್ಕಳ ಹಾಗೂ ಅದರಲ್ಲಿಯೂ ವಿಶೇಷವಾಗಿ ತಂದೆ ತಾಯಿ ಕಳೆದುಕೊಂಡ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವ ಯೋಜನೆಗಳನ್ನು ರೂಪಿಸಬೇಕೆಂದು ಸಚಿವ ಲಾಡ್ ಅವರಲ್ಲಿ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಸಚಿವ ಲಾಡ್ ಅವರು, ಅಂತಹ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಜಿಲ್ಲಾಧ್ಯಕ್ಷ ರಾಜು ಆಲಗೂರ, ಶಾಸಕ ವಿಠಲ್ ಕಟಕದೊಂಡ್, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.