ವಿಜಯಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ದುರ್ಘಟನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದಲ್ಲಿ ಏಳನೇ ದಿನದ ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ಅವಘಡದಿಂದ ಓರ್ವ ಯುವಕ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಗಾಂಧಿಚೌಕ್ ಬಳಿಯ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ.
ಇಲ್ಲಿನ ಡೋಬಲೆ ಗಲ್ಲಿ ನಿವಾಸಿ
ಶುಭಂ ಸಂಕಳ (21) ಮೃತ ಯುವಕ.
ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಣೇಶನ ಮೂರ್ತಿ ಸಾಗಲು ಕೋಲಿನಿಂದ ವಿದ್ಯುತ್ ತಂತಿ ಎತ್ತುವ ಸಂದರ್ಭ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ನಡೆದಿದೆ.
ಯುವಕ ಶುಭಂ ಸಂಕಳ ಸ್ಥಳದಲ್ಲಿಯೇ ಅಸುನೀಗಿದರೆ, ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರದಲ್ಲಿ ಏಳನೇ ದಿನದ ನೂರಾರು ಗಣೇಶನ ಮೂರ್ತಿಗಳನ್ನು ರಾತ್ರಿಯಿಡಿ ವಿಸರ್ಜನೆ ಮಾಡಲಾಗಿದೆ.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.