Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಹಿರಿದು
(ರಾಜ್ಯ ) ಜಿಲ್ಲೆ

ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಹಿರಿದು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ.ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.
ಡಾ.ಜಾವೀದ ಜಮಾದಾರ ಅವರು ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಹೊಸ ಸಾಧನೆಯ ಬರೆದು ಮೈಲುಗಲ್ಲು ಸ್ಥಾಪಿಸುವ ಮೂಲಕ ಜಿಲ್ಲೆ, ರಾಜ್ಯದ ಕೀರ್ತಿಯನ್ನು ಹೆಚ್ಚಿಸಬೇಕು. ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಭಾಗಿಯಾಗಿ, ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ಎಂಬುದು ಮನವರಿಕೆ ಮಾಡಿಕೊಂಡು ಯುವಕರು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಕೊಳ್ಳುವುದರ ಮೂಲಕ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾಧಿಕಾರಿಗಳಾದ ರಾಜಶೇಖರ್ ದೈವಾಡಿ,ಕ್ರೀಡಾ ಇಲಾಖೆ ಕಚೇರಿಯ ಅಧೀಕ್ಷಕರಾದ ಪ್ರಿಯಂಕಾ ಜಿ, ಟಿ.ಪಿ. ಆಲೂರು, ಸಂಗೀತಾ ಮಠಪತಿ, ದೈಹಿಕ ಶಿಕ್ಷಕರು, ಕ್ರೀಡಾ ತರಬೇತಿದಾರರು, ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರು ಉಪಸ್ಥಿತರಿದ್ದರು.

“ಯುವಕರು ಆಟೋಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸದೃಢವಾದ ಆರೋಗ್ಯ ಹೊಂದಿ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಅತ್ಯಂತ ಹಿರಿದಾಗಿದೆ. ಮಕ್ಕಳು ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಅನೇಕ ಸೌಲಭ್ಯ ಒದಗಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರ ಮಟ್ಟದಲ್ಲಿ ಆಸಕ್ತಿಯುತ ಕ್ರೀಡೆಯಲ್ಲಿ ಸತತ ಪ್ರಯತ್ನ ಹಾಗೂ ಕಠಿಣ ಅಭ್ಯಾಸ ರೂಢಿಸಿಕೊಂಡು ಕ್ರೀಡಾ ಸಾಧಕರಾಗಿ, ಕ್ರೀಡಾ ಸೆಲೆಬ್ರೆಟಿಗಳಾಗಬೇಕು.”

– ಸಂಗಮೇಶ ಬಬಲೇಶ್ವರ
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.