ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಕ್ರೀಡೆಗಳು ಮನುಷ್ಯನ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರಿಯಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬೇಕೆಂದು ಪ್ರಭುಲಿಂಗೇಶ್ವರ ಅಂತರಾಷ್ಟ್ರೀಯ ಶಾಲೆಯ ಕಾರ್ಯಾಧ್ಯಕ್ಷ ವಿದ್ಯಾಧರ ಸವದಿ ಹೇಳಿದರು.
ಗ್ರಾಮದ ಪ್ರಭುಲಿಂಗೇಶ್ವರ ಅಂತರಾಷ್ಟ್ರೀಯ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಲಯ ಮಟ್ಟದ ವಿದ್ಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ಕ್ರೀಢೆಯಲ್ಲಿ ಅತ್ಯುತ್ತಮ ಸಾಧನೆ ಮಾಡುತಿದ್ದು ಸತತ ಪ್ರಯತ್ನ ಪಟ್ಟಲ್ಲಿ ದೇಶ, ನಾಡಿನ ಉತ್ತಮ ಕ್ರೀಢಾಪಟುವಾಗಿ ಬೆಳೆಯಲಿದ್ದಾರೆಂದರು.
ವಲಯ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ದ್ರಾಕ್ಷಾಯಿಣಿ ಮಂಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಗುವಿನಲ್ಲಿ ಶಿಸ್ತು, ಶೃಧ್ದೆ, ಪರಸ್ಪರ ಗೌರವ ಹಾಗೂ ಸಂಘಟನಾತ್ಮಕ ಶಕ್ತಿಯನ್ನು ಬೆಳೆಸಲು ಕ್ರೀಢೆಗಳು ಅತ್ಯಂತ ಅವಶ್ಯಕವೆಂದರು.
ತುಂತುರು ಮಳೆಯ ನಡುವೆಯೂ ಕ್ಲಷ್ಟರ ಮಟ್ಟದ ಶಾಲೆಗಳ ವಿದ್ಯಾರ್ಥಿಗಳು ಕ್ರೀಢೆಗಳಲ್ಲಿ ಭಾಗವಹಿಸಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾದರು.
ಸ್ಥಳಿಯ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯೆ ಶ್ರೀಮತಿ ಎಂ.ಎಸ್. ಜಿಟ್ಟಿ, ಹೆಣ್ಣುಮಕ್ಕಳ ಮಾದರಿ ಶಾಲೆಯ ಮುಖ್ಯ ಗುರು ಎಂ.ಎಸ್. ಬಿರಾದರ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾದ್ಯಾಯರು, ದೈಹಿಕ ಶೀಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.