ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅನಾಮಧೇಯ ಅಂದಾಜು ೩೫ ರಿಂದ ೪೦ ವರ್ಷ ವಯಸ್ಸಿನ ವ್ಯಕ್ತಿ ಶವ ಪತ್ತೆಯಾಗಿರುವ ಕುರಿತು ವಿಜಯಪುರದ ಗೋಲಗುಮ್ಮಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಸಾರ್ವಜನಿಕರಲ್ಲಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸಪೇಕ್ಟರ್ ಅವರು ಮನವಿ ಮಾಡಿಕೊಂಡಿದ್ದಾರೆ.
ಪತ್ತೆಯಾದ ವ್ಯಕ್ತಿಯು ೫ ಪೂಟ್ ಎತ್ತರ, ಸಾಧಾರಣ ಮೈಕಟ್ಟು, ನೆಟ್ಟನೆಯ ಮೂಗು, ಕಪ್ಪು ಕೂದಲು, ಶರ್ಟ್, ಪ್ಯಾಂಟ್ ಧರಿಸಿದ್ದು, ಈ ಚಹರೆಯುಳ್ಳ ವ್ಯಕ್ತಿಯ ವಾರಸುದಾರರು ಪತ್ತೆಯಾದಲ್ಲಿ ಸಾರ್ವನಜಿಕರು ವಿಜಯಪುರ ಗೋಲಗುಮ್ಮಜ್ ಠಾಣೆಯ ದೂರವಾಣಿ ಸಂಖ್ಯೆ: ೦೮೩೫೨-೨೫೦೨೫೨, ೦೮೩೫೨-೨೫೩೧೦೦, ೦೮೩೫೨-೨೫೦೧೫೨ ಹಾಗೂ ೦೮೩೧-೨೪೦೫೨೦೧ಗೆ ಸಂಪರ್ಕಿಸಬಹುದಾಗಿದೆ ಎಂದು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸಪೇಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.