ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ ೬ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು, ಆಲಮಟ್ಟಿಯಲ್ಲಿನ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸೆಪ್ಟೆಂಬರ್ ೬ರ ಮಧ್ಯಾಹ್ನ ೧೨ಗಂಟೆಗೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸುವ ಅವರು,ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ನೆರವೇರಿಸಿ, ಅದೇ ದಿನ ಮಧ್ಯಾಹ್ನ ೩ಗಂಟೆಗೆ ಕೊಪ್ಪಳ ಜಿಲ್ಲೆಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.