ಆಲಮಟ್ಟಿ ಅಂಗಳದಲ್ಲಿ ಪೋಲಿಸ್ ಬಿಗಿ ಭದ್ರತೆ ನಿಯೋಜನೆ | ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸುದ್ದಿಗೋಷ್ಠಿ
ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೆ.೬ ಶನಿವಾರ ಮಧ್ಯಾಹ್ನ ೧೨ ಕ್ಕೆ ಕೃಷ್ಣಗೆ ಆಲಮಟ್ಟಿಯಲ್ಲಿ ಬಾಗಿನ ಅರ್ಪಿಸಲಿದ್ದಾರೆ. ಆ ಹಿನ್ನೆಲೆಯಲ್ಲಿ ಲಾಲ್ ಬಹದ್ದೂರ್ ಜಲಾಶಯ ಸೇರಿದಂತೆ ಆಲಮಟ್ಟಿ ಸುತ್ತಲೂ ಪೋಲಿಸ್ ಬಿಗಿ ಬಂದೋಬಸ್ತ್ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲೆ ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ಗುರುವಾರ ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಬಾಗಿನ ಅರ್ಪಣೆಯ ನಂತರ ಪ್ರವಾಸಿ ಮಂದಿರಕ್ಕೆ ಬಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದರು.
ರೈತರು, ಸಾರ್ವಜನಿಕರಿಗೆ ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು ಪ್ರವಾಸಿ ಮಂದಿರದ ಬಲಬದಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಮನವಿ ಸಲ್ಲಿಸುವವರು ಮೊದಲೇ ಸ್ಥಳೀಯ ಠಾಣೆಯಲ್ಲಿ ಅನುಮತಿ ಪಡೆಯಬೇಕು, ಒಂದು ಮನವಿಗೆ ನಾಲ್ವರಿಗೆ ಅವಕಾಶ ನೀಡಲಾಗುತ್ತದೆ ಎಂದರು.
ಈ ಬಾರಿ ಭದ್ರತೆ ಹೆಚ್ಚಿಸಲಾಗಿದ್ದು ಸಾರ್ವಜನಿಕ ಪ್ರವೇಶ ನಿಷೇಧವಿದೆ ಎಂದರು.
ಮಧ್ಯಾಹ್ನ ೩ ಕ್ಕೆ ಆಲಮಟ್ಟಿಯಿಂದ ಅವರು ಬೆಂಗಳೂರಿಗೆ ತೆರಳಲಿದ್ದಾರೆ. ಎಂದರು.
ಬೆಳಗಾವಿ ಐಜಿಪಿ ಬಂದೋಬಸ್ತ ನೇತೃತ್ವ ವಹಿಸಲಿದ್ದಾರೆ. ಇಬ್ಬರು ಎಸ್.ಪಿ, ಆರು ಜನ ಡಿವೈಎಸ್ ಪಿ, ೧೩ ಸಿಪಿಐ, ೩೨ ಪಿಎಸ್‌ಐ ೨೪ ಎಎಸ್‌ಐ, ೯೦ ಜನ ಹೆಡ್ ಕಾನ್ಸಟೇಬಲ್, ೨೪೨ ಪೊಲೀಸ್ ಕಾನ್ಸಟೇಬಲ್, ೨೪ ಜನ ಮಹಿಳಾ ಕಾನ್ಸಟೇಬಲ್ ಜತೆಗೆ ಕೆಎಸ್‌ಐ ಎಸ್ ಎಫ್ ಪೊಲೀಸರು ಬಂದೋಬಸ್ತಗಾಗಿ ನಿಯೋಜನೆಗೊಳಿಸಲಾಗುತ್ತಿದೆ ಎಂದರು.
ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂರ್ಣ ಕುಂಭ ಸ್ವಾಗತ ಇಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಸಿಇ ಡಿ.ಬಸವರಾಜ, ಎಸ್ ಇ ವಿ.ಆರ್. ಹಿರೇಗೌಡರ, ಹೆಚ್ಚುವರಿ ಎಸ್ ಪಿ ರಾಮನಗೌಡ ಹಟ್ಟಿ, ಡಿವೈಎಸ್ ಪಿ ಬಲ್ಲಪ್ಪ ನಂದಗಾವಿ, ರವಿ ಚಂದ್ರಗಿರಿಯವರ, ಅಶೋಕ ಚವ್ಹಾಣ ಮತ್ತಿತರರು ಇದ್ದರು.
ಕೃಷ್ಣೆ ಜಲಧಿಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಪೋಲಿಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಣ್ಗಾವಲಿನಲ್ಲಿ ನಡೆಯಲಿದೆ.