ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಇದೇ ಸೆಪ್ಟಂಬರ್ ೮ ರಿಂದ ೧೭ರವರೆಗೆ ನಗರದ ಇಂಡಿ ರಸ್ತೆಯಲ್ಲಿರುವ ಚಾಂದನಿ ಫಂಕ್ಷನ್ ಹಾಲ್‌ನಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.
ವಸ್ತು ಪ್ರದರ್ಶನದಲ್ಲಿ ಖಾದಿ ಮಂಡಳಿಯಿಂದ ಧನಸಹಾಯ ಪಡೆದ ಫಲಾನುಭವಿಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದು, ವಿಜಯಪುರ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ, ದಾವಣಗೆರೆ. ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಬಳ್ಳಾರಿ, ಕೊಪ್ಪಳ, ಬೀದರ, ಮಂಡ್ಯ ಮೈಸೂರು, ಹಾಗೂ ಹೊರ ರಾಜ್ಯಗಳಿಂದ ಅರಳೆ ಖಾದಿ, ಉಣ್ಣೆ ಖಾದಿ, ಪಾಲಿವಸ್ತ್ರ, ಶುದ್ಧ ಖಾದಿ ರೇಷ್ಮೆ ಸೀರೆಗಳು, ಕಸೂತಿ ಸೀರೆಗಳು, ಜಾಕೇಟ್, ಕರದಂಟು, ಸಿಹಿ ತಿಂಡಿಗಳು, ಡಿಜೈನ್ ಬ್ಯಾಗಗಳು, ಬಿದಿರು ಬೆತ್ತ, ರೆಡಿಮೇಡ್ ಶರ್ಟ್ಗಳು, ಪಾದರಕ್ಷೆಗಳಂತಹ ಖಾದಿ ಉತ್ಪನ್ನಗಳು ವಸ್ತು ಈ ಪ್ರದರ್ಶನದಲ್ಲಿ ಕಾಣಬಹುದಾಗಿದೆ.
ವಿಜಯಪುರ ಜಿಲ್ಲೆಯ ನಾಗರಿಕರು ಈ ವಸ್ತು ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಹೆಚ್ಚಿನ ಪ್ರಮಾಣದಲ್ಲಿ ವಸ್ತುಗಳನ್ನು ಖರೀದಿಸಿ ವಸ್ತು ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಬೇಕೆಂದು ಖಾದಿ ಮಂಡಳಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.