ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಸಮರ್ಥ ವಿದ್ಯಾವಿಕಾಸ ವಿವಿದೋದ್ಧೇಶಗಳ ಪ್ರೇರಣಾ ಸಮೂಹ ಶಿಕ್ಷಣ ಸಂಸ್ಥೆ ಮತ್ತು ಶಾಲಾ ಮಕ್ಕಳ ಸಹಯೋಗದಲ್ಲಿ ಸೆ.೦೫ ಶುಕ್ರವಾರದಂದು ಮದ್ಯಾಹ್ನ ೩:೩೦ಗಂಟೆಗೆ ಶಾಲಾ ಆವರಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ತಿಳಸಿದ್ದಾರೆ.
ಕಾರ್ಯಕ್ರಮವನ್ನು ಮಾಜಿ ವಿಪ ಸದಸ್ಯ ಅರುಣ ಶಹಾಪೂರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ, ಸೋಮನಾಳ ಸರಕಾರಿ ಪ್ರೌಢಶಾಲೆಯ ಮುಖ್ಯಗುರು ಆರ್.ಎಸ್.ನೀರಲಗಿ ಆಗಮಿಸಲಿದ್ದಾರೆ. ಗೌರವ ಉಪಸ್ಥಿತಿಯನ್ನು ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಶಾಲಾ ಮುಖ್ಯಗುರುಮಾತೆ ಎಸ್.ಆಯ್.ಅಸ್ಕಿ ಹಾಗೂ ಎಂ.ಪಿ.ಬುಕ್ಕಾ ವಹಿಸಿಕೊಳ್ಳುವರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ವಹಿಸುವರು ಎಂದು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.