ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ತಾಲೂಕಿನ ಸಿದ್ದಾಪುರ ಗ್ರಾಮದ ಮುಧೋಳ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸಿಮೆಂಟ್ ಲಾರಿ ಟ್ಯಾಂಕರ್ ಟೈರಗಳು ಕಾಯ್ದು ಆಕಸ್ಮಿಕವಾಗಿ ಬೆಂಕಿ ಹತ್ತಿ ಲಾರಿಯ ಮುಂದಿನ ಭಾಗ ಸುಟ್ಟು ಕರಕಲಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ತಾಲೂಕಿನ ಚಾಲಕ ಜಗದೀಶ ಗುರಪ್ಪ ಪಾಟೀಲ ಸಿಮೆಂಟ್ ಟ್ಯಾಂಕರ್ ಲಾರಿಯನ್ನು ಲೋಕಾಪೂರ ಕಡೆಯಿಂದ ಮುಧೋಳ ಹಾಗೂ ಜಮಖಂಡಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಹೋಗುವ ಸಂಧರ್ಭದಲ್ಲಿ ಸಿದ್ದಾಪೂರ ಗ್ರಾಮದ ರಸ್ತೆ ಮೇಲೆ ಅಕಸ್ಮಿಕವಾಗಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಶಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.