ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಸಕ್ತ ಸಾಲಿನ (೨೦೨೬-೨೬) ಸ್ನಾತಕೋತ್ತರ ಮತ್ತು ಪಿಜಿ ಡಿಪ್ಲೋಮಾ ವ್ಯಾಲ್ಯು ಆಡೆಡ್ ಡಿಪ್ಲೋಮಾ/ಅಡ್ವಾನ್ಸ್ ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಖಾಲಿ ಉಳಿದ ಸೀಟುಗಳ ಭರ್ತಿಗಾಗಿ ಸೆಪ್ಟೆಂಬರ್ ೨೮ರ ವರೆಗೆ ಪ್ರವೇಶ ದಿನಾಂಕ ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ವಿದ್ಯಾರ್ಥಿನಿಯರು ಆ ದಿನಾಂಕದ ವರೆಗೆ ಪ್ರವೇಶಾತಿ ಪಡೆಯಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಅವರು ತಿಳಿಸಿದ್ದಾರೆ.
ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮಹಿಳಾ ಅಧ್ಯಯನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಅರ್ಥಶಾಸ್ತç, ಸಮಾಜಶಾಸ್ತç, ಸಮಾಜ ಕಾರ್ಯ, ಎಂ.ಎಸ್‌ಸಿ ಇನ್ ಬಯೋಇನ್ಫರ‍್ಮೆಟಿಕ್ಸ್, ಬಯೋಟೆಕ್ನಾಲಜಿ, ಭೌತಶಾಸ್ತ, ಕಂಪ್ಯೂಟರ್ ಸೈನ್ಸ್, ಸಂಖ್ಯಾಶಾಸ್ತ, ಆಹಾರ ಸಂಸ್ಕರಣೆ ಮತ್ತು ಪೋಷಣೆ, ರಸಾಯನಶಾಸ್ತ, ಗಣಿತಶಾಸ್ತ, ಔಷಧೀಯ ರಸಾಯನಶಾಸ್ತ, ಮತ್ತು ಎಂಎಡ್, ಎಂಪಿಎಡ್, ಬಿಪಿಎಡ್, ಸಂಗೀತ ವಿಷಯಗಳ ಸ್ನಾತಕೋತ್ತರ ಕೋರ್ಸ್ಗಳಿಗೆ ಮತ್ತು ಪಿಜಿಡಿಸಿಯಲ್ಲಿ ಸೀಟುಗಳು ಲಭ್ಯವಿವೆ. ಸೆಪ್ಟೆಂಬರ್ ೨೮ರ ವರೆಗೆ ಈ ಕೋರ್ಸ್ಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು.
ಈ ಮೇಲೆ ಹೇಳಿರುವ ಮಹಿಳಾ ವಿಶ್ವವಿದ್ಯಾನಿಲಯದ ಯಾವುದೇ ವಿಭಾಗಗಳಲ್ಲಿ ಪ್ರವೇಶ ಪಡೆಯಲು ಈಗಾಗಲೇ ಯುಯುಸಿಎಂಎಸ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಇಲ್ಲಿಯ ವರೆಗೆ ಪ್ರವೇಶ ಪಡೆಯದೇ ಇರುವವರು ಮತ್ತು ಈಗಾಗಲೇ ಅರ್ಜಿ ಸಲ್ಲಿಸದೇ ಇರುವವರು ಸಹ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೨೮ರ ಕೊನೆಯ ದಿನವಾಗಿದ್ದು ಯುಯುಸಿಎಂಎಸ್ https://uucms.karnataka.gov.in/Login/Index ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ನೇರವಾಗಿ ಖಾಲಿ ಸೀಟುಗಳು ಲಭ್ಯವಿರುವ ಯಾವುದೇ ವಿಭಾಗ, ಸ್ನಾತಕೋತ್ತರ ಕೇಂದ್ರಗಳಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿವಿಯ website: www.kswu.ac.in ಸಂಪರ್ಕಿಸಬಹುದಾಗಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆೆಯಲ್ಲಿ ತಿಳಿಸಿದ್ದಾರೆ.