ಉದಯರಶ್ಮಿ ದಿನಪತ್ರಿಕೆ
ದೇವರ ಹಿಪ್ಪರಗಿ: ತಾಲ್ಲೂಕಿನ ಹುಣಶ್ಯಾಳ ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯಶಿಕ್ಷಕ ಶರಣಬಸಪ್ಪ ಶಿ.ಗಡೇದ ಅವರಿಗೆ ಗುರುಶ್ರೀ ರಾಜ್ಯ ಪ್ರಶಸ್ತಿ ಲಭಿಸಿದೆ.
ವಿವೇಕ ಚೇತನ ಚಾರಿಟಬಲ್ ಟ್ರಸ್ಟ್ ಬೆಂಗಳೂರು. ಹಾಗೂ ರಾಘವೇಂದ್ರ ಪ್ರಕಾಶನ ಬೆಂಗಳೂರು ಇವರ ಸಹಯೋಗದಲ್ಲಿ ಇದೇ ಸೆ.13 ರಂದು ಬೆಂಗಳೂರಿನಲ್ಲಿ ಜರುಗಲಿರುವ “ಶಿಕ್ಷಕರ ದಿನಾಚರಣೆ ಹಾಗೂ ಅಭಿಯಂತರರ ದಿನಾಚರಣೆ” “ರಾಜ್ಯ ಮಟ್ಟದ ‘ಗುರುಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಾಘವೇಂದ್ರ ಪ್ರಕಾಶನದ ರಾಘವೇಂದ್ರ ಜಿ.ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ