Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ :ಸಿಎಂ
(ರಾಜ್ಯ ) ಜಿಲ್ಲೆ

ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ :ಸಿಎಂ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿಯಲ್ಲಿ ಕೃಷ್ಣಾ ಜಲಾಶಯಕ್ಕೆ ಬಾಗಿನ ಅರ್ಪಣೆ | ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಕುರಿತು ವಾರದೊಳಗೆ ಸಭೆ | ಸಿಎಂ ಸಿದ್ಧರಾಮಯ್ಯ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಶನಿವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರು ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋಗುವುದರಿಂದ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬವಾಗುತ್ತದೆ. ಈ ಹಿನ್ನಲೆಯಲ್ಲಿ ರೈತರು ಪರಿಹಾರ ಕೊಡಿ ಎಂದು ನ್ಯಾಯಾಲಯದ ಮೊರೆ ಹೋಗದಂತೆ ಅವರು ಮನವಿ ಮಾಡಿಕೊಂಡರು.
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ಪ್ರಶಸ್ತಿ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು, ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ ೫೧೯.೬ ಮೀ. ರಿಂದ ೫೨೪.೨೫ ಮೀಟರ್‌ಗೆ ಎತ್ತರಿಸುವುದರಿಂದ ೧೩೦ ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. ೧೭೩ ಟಿಎಂಸಿ ನೀರನ್ನು ೬.೬ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. . ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ. ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಜವಳಿ,ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ರಾಜೂಗೌಡ ಪಾಟೀಲ, ಅಶೋಕ ಮನಗೂಳಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ವಿಜಯಪುರ-ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕಿದೆ :ಡಿಕೆಶಿ

ಆಲಮಟ್ಟಿ ಅಣೆಕಟ್ಟು ಎತ್ತರವನ್ನು ೫೧೮ ಮೀ. ನಿಂದ ೫೨೪ ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಅಣೆಕಟ್ಟು ಎತ್ತರ ಹೆಚ್ಚಳ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಾವು ಕೇಂದ್ರದ ಮೇಲೆ ಹಾಕುತ್ತಿರುವ ಒತ್ತಡ ನೋಡಿದರೆ ಯಾವ ಕ್ಷಣದಲ್ಲಿ ಬೇಕಾದರೂ ಅಧಿಸೂಚನೆ ಹೊರಡಿಸಬಹುದು. ನಮ್ಮ ಪಾಲು ನಮಗೆ ಸಿಗಲೇಬೇಕು. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು. ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಸಿ ಬೆಲೆ ನಿಗದಿ ತೀರ್ಮಾನ ಮಾಡಲಾಗುವುದು. ಯಾವುದೇ ಮೇಲ್ಮನವಿ ಇಲ್ಲದಂತೆ ಒಂದೇ ಹಂತದ ಒಪ್ಪಿತ ಭೂಸ್ವಾಧೀನಕ್ಕೆ ಮುಖಂಡರು, ಜನಪ್ರತಿನಿಧಿಗಳು ಒಪ್ಪಿಗೆ ನೀಡಬೇಕು. ಪುನರ್ವಸತಿ ಬಗ್ಗೆ ಪ್ರತ್ಯೇಕ ತೀರ್ಮಾನ ಮಾಡಲಾಗುವುದು. ಸಮುದ್ರಕ್ಕೆ ಹೋಗುತ್ತಿರುವ ನೀರನ್ನು ನಮ್ಮ ಜನರಿಗೆ ನೀರಾವರಿ ಕಲ್ಪಿಸುವುದು ನಮ್ಮ ಸಂಕಲ್ಪ. ಇದನ್ನು ಇದೇ ಅವಧಿಯಲ್ಲಿ ಮಾಡಲು ಮುಂದಾಗಿದ್ದೇವೆ ಎಂದು ಡಿಸಿಎಂ ಭರವಸೆ ನೀಡಿದರು.

“ಮುಳುಗಡೆ ಜಮೀನುಗಳಿಗೆ ಉದಾರ ಮನಸ್ಸಿನಿಂದ ಪರಿಹಾರ ನೀಡಬೇಕು. ಕಾಲುವೆಗಳು ಹಾದು ಹೋಗುವ ಕಡೆ ರೈತರಿಗೆ ಅನುಕೂಲವಾಗುವುದರಿಂದ ಇಂತಿಷ್ಟೇ ಪರಿಹಾರ ಬೇಕು ಎನ್ನುವ ಬೇಡಿಕೆಯಿಲ್ಲ”

– ಯಶವಂತರಾಯ ಗೌಡ ಪಾಟೀಲ
ಶಾಸಕರು, ಇಂಡಿ

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.