ಸಿಂದಗಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ವೈಯಕ್ತಿಕ ಮತ್ತು ಗುಂಪು ಆಟಗಳಲ್ಲಿ ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ೪೩ ಜನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ವಿಮಲಕಾಂತ ಪಾಟೀಲ, ಉಪಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ, ಪಿ.ವ್ಹಿ.ಮಹಲಿನಮಠ,.ಎನ್.ಬಿ.ಪೂಜಾರಿ, ಸುನೀಲ ಪಾಟೀಲ, ಪ್ರಸನ್ನ ಜೋಗೂರ, ಎಸ್.ಎಚ್.ಜಾಧವ, ಎಸ್.ಎಸ್.ತಾಳಿಕೋಟಿ, ಶಿವಶರಣ ಬೂದಿಹಾಳ, ಬಿ.ಬಿ.ಜಮಾದಾರ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ರೋಹಿತ ಸುಲ್ಪಿ, ರಾಹುಲ ನಾರಾಯಣಕರ್, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಆರ್.ಡಿ.ಪಾಟೀಲ ಕಾಲೇಜ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
Related Posts
Add A Comment

