ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪಂಚಾಯತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದಿಂದ ೨೦೨೫-೨೬ನೇ ಸಾಲಿನಲ್ಲಿ ಗ್ರಾಮೀಣ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಉಪಕರಣ ಪಡೆಯಲು ಅರ್ಹ ಗ್ರಾಮೀಣ ಕುಶಲಕರ್ಮಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಗ್ರಾಮೀಣ ಕುಶಲಕರ್ಮಿಗಳು ದಿನಾಂಕ : ೦೮-೧೦-೨೦೨೫ರೊಳಗಾಗಿ ವೆಬ್‌ಸೈಟ್ www.vijayapura.nic.in ಮೂಲಕ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಭರ್ತಿ ಮಾಡಿ ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ಉಪನಿರ್ದೇಶಕರ ಕಚೇರಿ, ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣ, ಸ್ಟೇಶನ್ ಬ್ಯಾಕ್ ರಸ್ತೆ, ಶಿಕಾರಖಾನೆ, ವಿಜಯಪುರ ಕಚೇರಿ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೯೭೨೧೬೨೨೨೨ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.