ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ನಿಗಮದ ವೆಬ್‌ಸೈಟ್https://eitbt.karnataka.gov.in/en ಮೂಲಕ ಸಲ್ಲಿಸಬಹುದಾಗಿದ್ದು, ಅಗತ್ಯ ದಾಖಲಾತಿ, ಅರ್ಹತೆ ಸೇರಿದಂತೆ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅಥವಾ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.