Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಳೆಯಿಂದಾದ ಬೆಳೆಹಾನಿ ಸಮೀಕ್ಷೆ ವರದಿ ಪ್ರಚುರಪಡಿಸಿ
(ರಾಜ್ಯ ) ಜಿಲ್ಲೆ

ಮಳೆಯಿಂದಾದ ಬೆಳೆಹಾನಿ ಸಮೀಕ್ಷೆ ವರದಿ ಪ್ರಚುರಪಡಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆ ವರದಿಯನ್ನು ಪ್ರಕಟಿಸಿ, ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ವರದಿ ವಿಂಗಡಿಸಿ ಸಲ್ಲಿಸುವಂತೆ ಸಂಬಂಧಿಸಿದ ತಾಲೂಕಾ ತಹಶೀಲ್ದಾರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯ ೧೩ ತಾಲೂಕುಗಳಲ್ಲಿ ಹಾನಿಗೊಳಗಾದ ಬೆಳೆಗಳ ಜಂಟಿ ಸಮೀಕ್ಷೆ ನಡೆಸಿದ್ದು, ೨೧೬೮೩.೯ ಹೆಕ್ಟೇರ್ ಕೃಷಿ ಹಾಗೂ ೪೫೦ ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಸಮೀಕ್ಷಾ ವರದಿಯನ್ನು ಜಿಲ್ಲೆಯ ಸಂಬಂಧಿಸಿದ ಗ್ರಾಮ ಪಂಚಾಯತ್ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ತಹಶೀಲ್ದಾರ ಕಾರ್ಯಾಲಯಗಳಲ್ಲಿ ಹಾನಿಗೊಳಗಾದ ರೈತರ ಬೆಳೆಗಳ ಪಟ್ಟಿಯನ್ನು ಪ್ರಚುರಪಡಿಸಿ ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ವರದಿಯನ್ನು ವಿಂಗಡಿಸಿ ಅಂತಿಮ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಜಿಲ್ಲೆಯ ೧೩ ತಾಲೂಕಿನ ತಹಶೀಲ್ದಾರಗಳು ಸರ್ಕಾರದ ನಿರ್ದೇಶನದಂತೆ ತಮ್ಮ ತಾಲೂಕಿನಲ್ಲಿ ಬೆಳೆ ಹಾನಿಯಾದ ರೈತ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರ ಸೇರಿದಂತೆ ವಿವಿಧಡೆ ಪ್ರಚುರಪಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಎಲ್ಲ ತಹಶೀಲ್ದಾರಗಳು ಈಗಾಗಲೇ ಹಾನಿಯಾದ ಭಾಗಶ ಮನೆ, ಕಚ್ಚಾ ಮನೆಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಮಳೆ ಸೇರಿದಂತೆ ಪ್ರಾಕೃತಿಕ ವಿಕೋಪದಿಂದ ರಸ್ತೆಗಳ ಸಂಪರ್ಕ ಕಡಿಗೊಂಡಲ್ಲಿ ತಕ್ಷಣ ಸ್ಪಂದಿಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕಿನ ನೋಡಲ್ ಅಧಿಕಾರಿಗಳು ತಾಲೂಕಿನ ಸಮಗ್ರ ಮಾಹಿತಿ ಹೊಂದಿ, ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಂಚಿತವಾಗಿಯೇ ಸಭೆಗಳನ್ನು ನಡೆಸಿ, ಸೂಕ್ತ ತಿಳುವಳಿಕೆ ಮೂಡಿಸಬೇಕು. ಜಿಲ್ಲೆಯಾದ್ಯಂತ ವಿಫಲವಾಗಿರುವ ಕೊಳವೆ ಬಾವಿಗಳಿದ್ದಲ್ಲಿ ಕೂಡಲೇ ಮುಚ್ಚಲು ಕ್ರಮ ವಹಿಸಬೇಕು. ಯಾವುದೇ ಅನಾಹುತಕ್ಕೆ ಅವಕಾಶ ನೀಡದೇ ಸಮರ್ಪಕವಾಗಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಆಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ, ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ ನ್ಯಾಮಗೊಂಡ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.