ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲೂಕಿನ ದೇವರಹುಲಗಬಾಳ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿ ಶ್ರೀಮತಿ ಶೈಲಾ ಭೂಪಾಲಪ್ಪ ಗೊಂಗಡಿ ಅವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದರು.
ಸೆ.೫ ರಂದು ವಿಜಯಪುರದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನೋತ್ಸವದ ಅಂಗವಾಗಿ, ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.