ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮಸಮಾಜದ ನಿರ್ಮಾಣ ನಮ್ಮ ಗುರಿಯಾಗಬೇಕು ಎಂದು ತಹಶೀಲ್ದಾರ ಸಂತೋಷ ಮ್ಯಾಗೇರಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿ, ನಾವೆಲ್ಲರೂ ಒಂದೇ ಎಂಬ ಸಮ ಸಮಾಜದ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರ ಎಂದು ನಾರಾಯಣ ಗುರುಗಳ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ. ಅವರು ಬುದ್ದ, ಬಸವ, ಕನಕದಾಸ ರೀತಿಯ ಸಂತರು. ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ಎನ್.ಕೆ. ನದಾಫ್ , ಲೋಕೇಶ ಪೂಜಾರಿ, ಯಮನಪ್ಪ ಪೂಜಾರಿ ಬಾಪು ಈಳಗೇರ, ಶ್ರೀಶೈಲ ಹಂಡಿ ಮತ್ತು ಸಮಾಜದ ಹಿರಿಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.