ವಿಜಯಪುರ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆಗಳು, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ ಸ್ಥಾಪನೆಗೆ ಸಹಾಯಧನ-ಸಾಲ ಸೌಲಭ್ಯ, ವಿಭೂತ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅರ್ಜಿದಾರರು ದಿನಾಂಕ : ೩೦-೧೦-೨೦೨೩ರೊಳಗೆ ಸೇವಾಸಿಂಧು ಪೋರ್ಟ್ಲ್ : https://www.sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ : https://kv1dc1.karnataka.gov.in ಹಾಗೂ ಸಹಾಯವಾಣಿ ೦೮೦-೨೨೮೬೫೫೨೨, ೯೯೦೦೧೨೩೫೧ ಅಥವಾ ನಿಗದಮ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ವಿಜಯಪುರ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
Related Posts
Add A Comment