ವಿಜಯಪುರ: ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅರ್ಜಿದಾರರು ದಿನಾಂಕ : ೩೧-೧೦-೨೦೨೩ರೊಳಗೆ ಸೇವಾಸಿಂಧು ಪೋರ್ಟ್ಲ್ : https://www.sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ : https://www.dbcdc.karnataka.gov.in ಹಾಗೂ ಸಹಾಯವಾಣಿ ೦೮೦-೨೨೩೭೪೮೩೨ ಸಂಪರ್ಕಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಉಚಿತವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
Related Posts
Add A Comment