ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಬೆಂಗಳೂರು (ಕಾಸಿಯಾ) ಇವರ ಸಹಯೋಗದಲ್ಲಿ ಎಂಎಸ್‌ಎಂಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆಯಡಿ ಝಡ್‌ಇಡಿ ಮತ್ತು ಲೀನ್ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸೆ.೧೧ ರಂದು ಸಿಂದಗಿಯ ಹೋಟೆಲ್ ಡಾಲ್ಪಿನ್‌ನಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಎಂಎಸ್‌ಎಂಇ ಉದ್ದಿಮೆದಾರರು ಭಾಗವಹಿಸಿ ಒಂದು ದಿನದ ಅರಿವು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.