ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ ಹಾಗೂ ಜುಡೋ ಕ್ರೀಡೆಗಳನ್ನು ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.೧೧ ಹಾಗೂ ೧೨ ರಂದು ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವೀತಿಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ದಿನಾಂಕ : ೧೧-೦೯-೨೦೨೫ ರಂದು ಬೆಳಿಗ್ಗೆ ೮ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಮೊ: ೭೦೧೯೦೦೮೪೪೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.