Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ

ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಪ್ರಭುಲಿಂಗಲೀಲೆಯ ಶ್ರೇಷ್ಠ ಕವಿ ಚಾಮರಸ
ವಿಶೇಷ ಲೇಖನ

ಪ್ರಭುಲಿಂಗಲೀಲೆಯ ಶ್ರೇಷ್ಠ ಕವಿ ಚಾಮರಸ

By No Comments5 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಡಾ.ಶಶಿಕಾಂತ ಪಟ್ಟಣ
ರಾಮದುರ್ಗ – ಪುಣೆ
ಮೊ:9552002338

ಉದಯರಶ್ಮಿ ದಿನಪತ್ರಿಕೆ

ಗದಗ ಜಿಲ್ಲೆಯ ಗಜೇಂದ್ರಗಡ ಪಕ್ಕದ ನಾರಾಯಣಪುರ ಒಂದು ಐತಿಹಾಸಿಕ ಪಟ್ಟಣ. ಕುಮಾರವ್ಯಾಸನ ಸಂಬಂಧಿ ಅಳಿಯ ಚಾಮರಸನ ಹುಟ್ಟು ಊರು. ಅವರಿಬ್ಬರೂ ಸಮಕಾಲೀನರು ಮತ್ತು ಸಾಹಿತಿಕ ಪ್ರತಿಸ್ಪರ್ಧಿಗಳಾಗಿದ್ದರು. ಚಾಮರಸನ ಪ್ರಭುಲಿಂಗ ಲೀಲೆ ಅವತ್ತಿನ ಅತ್ಯಂತ ಶ್ರೇಷ್ಠ ಮಹಾಕಾವ್ಯ. ಇಮ್ಮಡಿ ದೇವರಾಯ ಪ್ರೌಢದೇವರಾಯ ಚಾಮರಸನನ್ನು ಕೆಲ ಕಾಲ ಮಂತ್ರಿಯನ್ನಾಗಿ ಮಾಡಿದನೆಂದು ಇತಿಹಾಸದಲ್ಲಿ ಕೇಳಿ ಬರುತ್ತದೆ.
ಚಾಮರಸಸು ಕನ್ನಡದ ಪ್ರಸಿದ್ಧ ಕವಿ. ಇವರು ಪ್ರಭುಲಿಂಗ ಲೀಲೆಯು ಭಾಮಿನಿ ಷಟ್ಪದಿಯಲ್ಲಿ ಬರೆಯಲಾದ ಈತನ ಪ್ರಸಿದ್ಧ ಕಾವ್ಯ. ಇಮ್ಮಡಿ ಪ್ರೌಢದೇವರಾಯರ ರಾಜಾಶ್ರಯದಲಿದ್ದರು. ಅನ್ಯಮತ ಕೋಳಾಹಲ (ಈ ರೀತಿ ಬಿರುದಿದ್ದರೂ ಅವನ ಕಾವ್ಯಗಳಲ್ಲಿ ಯಾವುದೇ ಮತೀಯವಾದ ಕಂಡು ಬರುವುದಿಲ್ಲ), ವೀರಶೈವಾಚಾರ ಮಾರ್ಗ ಸಾರೋದ್ಧಾರ ಇವರ ಬಿರುದುಗಳು.
ಪ್ರಸಿದ್ಧಿ
ನಡುಗನ್ನಡದ ಶ್ರೇಷ್ಠ ಕಾವ್ಯ ಎಂದು ಪ್ರಸಿದ್ಧವಾಗಿರುವ ಪ್ರಭುಲಿಂಗಲೀಲೆಯ ಕರ್ತೃ. ಲಿಂಗಾಯತ ಕವಿ. ವಿಜಯನಗರದ ಪ್ರೌಢ ದೇವರಾಯನ ಕಾಲದ ನೂರೊಂದು ವಿರಕ್ತರಲ್ಲಿ ಗಣನೆಯಾಗಿದ್ದಾನೆ. ಈತನ ಸ್ಥಳ ಗದಗ ಇಲ್ಲವೆ ನಾಗಣಾಪುರ ಎಂದು ಹೇಳಲಾಗಿದೆ.
ಕಾವ್ಯ
ಹರಿಹರ ರಾಘವಾಂಕರ ತರುವಾಯ ಐತಿಹಾಸಿಕ ವ್ಯಕ್ತಿಗಳನ್ನು ಕುರಿತು ಕಾವ್ಯ ಬರೆದವರಲ್ಲಿ ಚಾಮರಸ ಅಗ್ರಗಣ್ಯ. 25 ಗತಿಗಳು ಮತ್ತು 1111 ಪದ್ಯಗಳನ್ನು ಒಳಗೊಂಡಿರುವ ಪ್ರಭುಲಿಂಗಲೀಲೆ ಮಧ್ಯಮ ಗಾತ್ರದ ಕಾವ್ಯ. ಪ್ರಭುಲಿಂಗಲೀಲೆ, ಎಂದರೆ ಪ್ರಭುವೇ ಲಿಂಗಲೀಲೆಯಲ್ಲಿ ಮೆರೆದುದು ಎಂಬ ಭಾವ ಬರುವಂತೆ ಹೆಸರಿಸಿ, ಕಾವ್ಯದ ಉದ್ದಕ್ಕೂ ಅದೇ ರೀತಿ ಅಲ್ಲಮನ ಚರಿತ್ರೆಯನ್ನು ಕವಿ ಉಜ್ಜ್ವಲವಾಗಿ ಚಿತ್ರಿಸಿದ್ದಾನೆ. ಕವಿಯ ವಿಷಯವಾಗಿ ಹೆಚ್ಚಿನ ಯಾವ ಮಾಹಿತಿ ಸಿಗದಿದ್ದರೂ ಆತ ಚಿತ್ರಿಸಿರುವ ಅಲ್ಲಮನ ಚರಿತ್ರೆಯನ್ನೇ ಆಧರಿಸಿ ಊಹಿಸುವುದಾದರೆ ಚಾಮರಸನೂ ತನ್ನ ಕಥಾನಾಯಕನಂತೆ ವಿರಕ್ತನೂ, ಸಂಯಮಿಯೂ ಸದಾಚಾರ ಸಂಪನ್ನನೂ ಆಗಿದ್ದನೆಂದು ಊಹಿಸಬಹುದಾಗಿದೆ.
ಹನ್ನೆರಡನೆಯ ಶತಮಾನದಲ್ಲಿ ಮಾನವಕುಲದ ಉದ್ಧಾರಕ್ಕಾಗಿ ನಡೆದ ಶಿವಶರಣರ ಕ್ರಾಂತಿಯಲ್ಲಿ ಅಲ್ಲಮಪ್ರಭು ಜ್ಞಾನನಿಧಿಯಾಗಿ ವೈರಾಗ್ಯ ಮೂರ್ತಿಯಾಗಿ ಕಂಗೊಳಿಸಿದ್ದಾನೆ. ಅಂಧಾಭಿಮಾನಕ್ಕೆ ಒಳಗಾಗದೆ ಸಾಧಕರ ಲೋಪ ದೋಷಗಳ ಮೇಲೆ ಜ್ಞಾನದ ಬೆಳಕನ್ನು ಬೀರಿ ಅವರನ್ನು ಒರೆದು, ಕೆಡೆನುಡಿದು, ದಾರಿ ತೋರಿ ಸಮಸ್ತಜಾತಿಯ ಜಾಲವನ್ನು ಸರ್ವವನ್ನು ಕರುಣಿಸಿ, ಉದ್ಧರಿಸುತ್ತ ಸಾಗಿದ ಈ ಮಹಾತ್ಮನ ದಿವ್ಯ ವ್ಯಕ್ತಿತ್ವವನ್ನು ಈ ಕಾವ್ಯ ಅಪೂರ್ವವಾದ ರೀತಿಯಲ್ಲಿ ಚಿತ್ರಿಸುತ್ತದೆ. ಅಲ್ಲಮ ಪ್ರಭುವಿನ ಚರಿತ್ರೆಯನ್ನು ಮೊಟ್ಟಮೊದಲು ಬರೆದ ಹರಿಹರ ತನ್ನ ಪ್ರಭುದೇವರ ರಗಳೆಯಲ್ಲಿ ಅಲ್ಲಮ ಕಾಮಲತೆಗೆ ಮರುಳಾಗಿ ವಿರಹದಿಂದ ಬೆಂದು ವೈರಾಗ್ಯ ಪಡೆದಂತೆ ಚಿತ್ರಿಸಿದ್ದರೆ ಲಲಿತನಿರ್ಮಲ ಚಂದ್ರಕಾಂತದ ಶಿಲೆಯ ಹತ್ತಿರ ಲತೆಯ ದಾವಾನಳನು ಕೊಳಲಾಜ್ವಾಲೆಯಾ ಶಿಲೆಯೊಳಗೆ ತೋರ್ಪಂತೆ ತಿಳಿಯದಯದ ಜನಕೆ ಮಾಯೆಯ ತಳಿತ ಕಾಮಜ್ವಾಲೆಯಲ್ಲಮನೊಳಗೆ ಪ್ರತಿಬಿಂಬಿಸಿದುದಾತನೆ ಕಾಮಿಯೆಂಬಂತೆ-ಎಂದು ಚಾಮರಸ ಅಲ್ಲಮನ ಗುರುಗುಹೇಶ್ವರ ಸ್ವರೂಪದ ದರ್ಶನ ಮಾಡಿಸಿದ್ದಾನೆ. ತನ್ನ ಕಾವ್ಯಸತ್ತವರ ಕಥೆಯಲ್ಲ ಜನನದ ಕುತ್ತದಲ್ಲಿ ಕುದಿ ಕುದಿದು ಕರ್ಮದ ಕತ್ತಲೆಗೆ ಸಿಲುಕುವರ ಸೀಮೆಯ ಮಾತು ತಾನಲ್ಲ ಎಂದು ಘೋಷಿಸಿ ಸತ್ಯಶರಣರು ತಿಳಿವುದೀ ಪ್ರಭುಲಿಂಗಲೀಲೆಯನು ಎಂದಿರುವುದು ಕವಿಯ ಉದ್ದೇಶಕ್ಕೆ ಸಾಕ್ಷಿ. ಮಲಯಜದ ಮರ ಗಾಳಿ ಸೋಂಕಿನಲುಳಿದ ಮರ ಪರಿಮಳಿಸುವಂತೆ ಅಲ್ಲಮನ ದಿವ್ಯ ಸಂಪರ್ಕದಿಂದ ಬಸವಣ್ಣ, ಸಿದ್ಧರಾಮ, ಗೊಗ್ಗಯ್ಯ, ಗೋರಕ್ಷ, ಮಾಯಾದೇವಿ, ಮಹಾದೇವಿಯಕ್ಕ, ಮುಕ್ತಾಯಕ್ಕ ಮೊದಲಾದವರು ಕಣ್ಗೆಸೆದರೂ ಆಯಾ ಪಾತ್ರವೃಕ್ಷಗಳು ತಮ್ಮ ಸತ್ತ್ವದಿಂದಲೇ ಬೆಳೆದು, ತಂತಮ್ಮ ನೆಲೆಯಲ್ಲಿ ನಿಂತು ಅಲ್ಲಮನ ಪಾದಕ್ಕೆ ಬಾಗಿ ಹೂ ಬಿಟ್ಟಿವೆ. ಒಂದು ದೃಷ್ಟಿಯಿಂದ ಪಾರ್ವತಿಯ ತಾಮಸಕಳೆಯಾಗಿ ಬಂದ ಮಾಯೆ ಅವಳಿಗೆ ತಿಳಿವನ್ನು ಕೊಟ್ಟ ವಿಮಳೆ, ಸಾತ್ತ್ವಿಕ ಕಳೆಯಾಗಿ ಬಂದ ಅಕ್ಕಮಹಾದೇವಿ, ಸುಜ್ಞಾನಿ ನಿರಹಂಕಾರರ ಮಗನಾಗಿ ಹುಟ್ಟಿದ ಅಲ್ಲಮ-ಈ ಮುಂತಾದ ಕಥಾರಚನೆಯಲ್ಲಿ ಆಧ್ಯಾತ್ಮಿಕವಾದ ಸಾಂಕೇತಿಕ ಧ್ವನಿಯ ಏಕತೆ ಕಾಣುತ್ತದೆ.ಶಿವನ ನಟ ನಾಟಕದ ಮಹಿಮೆಯನ್ನು ತೆರೆದು ತೋರಿಸುವ ಈ ಕಾವ್ಯದಲ್ಲಿ ಎಲ್ಲ ಪಾತ್ರಗಳೂ ಜೀವಕಳೆಯಿಂದ ಕೂಡಿ ಶಿವಕಳೆಯನ್ನು ಬೆಳಗುತ್ತವೆ.
ತಿಳಿಗನ್ನಡದ ತುಂಬಿದ ತೊರೆಯಂತೆ ನಿರರ್ಗಳವಾಗಿ ಹರಿಯುವ ಚಾಮರಸನ ಭಾಮಿನೀ ಷಟ್ಟದಿಯ ಶೈಲಿಯನ್ನು ಕುಮಾರವ್ಯಾಸನೊಡನೆ ಹೋಲಿಸಬಹುದಾದರೂ ಇವನ ಭಾಷೆ ನಯಗಾರಿಕೆಯಿಂದ ಕೂಡಿದೆ. ಆ ಕಾಲದ ಶಿವಶರಣರ ವಚನಗಳನ್ನು ಕವಿ ಚೆನ್ನಾಗಿ ಅಭ್ಯಾಸಮಾಡಿದ್ದ ಎಂಬುದಕ್ಕೆ ಇವನ ವಾಣಿ ಸಾಕ್ಷಿ ಹೇಳುತ್ತದೆ. ಭಾವ ಭಾಷೆಗಳಲ್ಲಿನ ಅಪೂರ್ವವಾದ ಹೊಂದಾಣಿಕೆಯಿಂದಲೂ ಉಜ್ಜ್ವಲವಾದ ಉಪಮೆ ರೂಪಕ ದೃಷ್ಟಾಂತಗಳಿಂದಲೂ ಸಮಯೋಚಿತವಾದ ವರ್ಣನೆ ಮತ್ತು ದೇಶೀಯ ಬೆಡಗಿನ ಪರಿಣಾಮದ ಉತ್ಕಟತೆಯಿಂದಲೂ ಇವನ ಶೈಲಿ ಇವನ ಸ್ವತಂತ್ರ ಕವಿತಾಮಾರ್ಗದ ಮುಖಬಿಂಬದಂತಿದೆ.
ಚಾಮರಸನ ಪ್ರಭುಲಿಂಗಲೀಲೆ ಸಂಸ್ಕೃತ, ತಮಿಳು, ತೆಲುಗು ಹಾಗೂ ಮರಾಠಿ ಭಾಷೆಗಳಿಗೆ ಭಾಷಾಂತರಗೊಂಡಿದೆ. ಇದು ಕನ್ನಡ ಭಾಷೆ ಹೊಂದಿದ ಕೀರ್ತಿ ಪಡೆದ ಏಕಮಾತ್ರ ಕನ್ನಡ ಕಾವ್ಯವಾಗಿದೆ.
ಚಾಮರಸನ ಪ್ರಭುಲಿಂಗಲೀಲೆಯ ರಚನೆಯ ನಿಜ ಕಾರಣ
ಚಾಮರಸ ಮತ್ತು ಕುಮಾರವ್ಯಾಸ ಇಮ್ಮಡಿ ಪ್ರೌಢದೇವರಾಯನ ಕಾಲದ ಆಸ್ಥಾನ ಕವಿಗಳು , ಕುಮಾರವ್ಯಾಸ ಕೋಳಿವಾಡದವನು ಗದಗ ವೀರನಾರಾಯಣನ ಗುಡಿಯಲ್ಲಿ ತನ್ನ ಕಾವ್ಯ ರಚನೆ ಮಾಡಿ ಭಾರತ ಕಥಾ ಮಂಜರಿ ರಚಿಸಿ ಇಮ್ಮಡಿ ಪ್ರೌಢದೇವರಾಯನ ಮೆಚ್ಚುಗೆಗೆ ಪಾತ್ರನಾದನು.
ಭಾರತ ಕಥಾ ಮಂಜರಿಯನ್ನು ಆನೆಯ ಮೇಲೆ ಮೆರೆಸಿದನು ಚಕ್ರವರ್ತಿ ಎಂಬುದು ಜನರಲ್ಲಿ ಪ್ರಚಲಿತವಿರುವ ಕಥೆ ಸಂಗತಿ.
ಕುಮಾರವ್ಯಾಸನು ನಾರಾಯಣಪುರದವನು ಒಂದು ಮಾಹಿತಿಯ ಪ್ರಕಾರ ಇಬ್ಬರು ಬ್ರಾಹ್ಮಣರು ಗೆಳೆಯರು ಆದರೆ ಕುಮಾರವ್ಯಾಸನ ಭಾರತ ಕಥಾ ಮಂಜರಿಗೆ ದೊರೆತ ಸಮ್ಮಾನ ಗೌರವದಿಂದ ಸ್ವಲ್ಪ ಮಟ್ಟಿಗೆ ಅಸಮಾಧಾನ ಹೊಂದಿದ ಕುಮಾರವ್ಯಾಸನು ಹನ್ನೆರಡನೆಯ ಶತಮಾನದ ಅಲ್ಲಮ ಪ್ರಭುವಿನ ಜೀವನ ಚರಿತ್ರೆಯನ್ನು ಅತ್ಯಂತ ಸುಂದವಾಗಿ ಭಾಮಿನಿ ಷಟ್ಪದಿಯಲ್ಲಿ ಬರೆಯಲು ನಿರ್ಧರಿಸಿದನು. ನಡುಗನ್ನಡದ ಶ್ರೇಷ್ಠ ಕಾವ್ಯ ಎಂದು ಪ್ರಸಿದ್ಧವಾಗಿರುವ ಪ್ರಭುಲಿಂಗಲೀಲೆಯ ಕರ್ತೃ.
ಹರಿಹರ ರಾಘವಾಂಕರ ತರುವಾಯ ಐತಿಹಾಸಿಕ ವ್ಯಕ್ತಿಗಳನ್ನು ಕುರಿತು ಕಾವ್ಯ ಬರೆದವರಲ್ಲಿ ಚಾಮರಸ ಅಗ್ರಗಣ್ಯ. 25 ಗತಿಗಳು ಮತ್ತು 1111 ಪದ್ಯಗಳನ್ನು ಒಳಗೊಂಡಿರುವ ಪ್ರಭುಲಿಂಗಲೀಲೆ ಮಧ್ಯಮ ಗಾತ್ರದ ಕಾವ್ಯ. ಪ್ರಭುಲಿಂಗಲೀಲೆ, ಎಂದರೆ ಪ್ರಭುವೇ ಲಿಂಗಲೀಲೆಯಲ್ಲಿ ಮೆರೆದುದು ಎಂಬ ಭಾವ ಬರುವಂತೆ ಹೆಸರಿಸಿ, ಕಾವ್ಯದ ಉದ್ದಕ್ಕೂ ಅದೇ ರೀತಿ ಅಲ್ಲಮನ ಚರಿತ್ರೆಯನ್ನು ಕವಿ ಉಜ್ಜ್ವಲವಾಗಿ ಚಿತ್ರಿಸಿದ್ದಾನೆ. ಕವಿಯ ವಿಷಯವಾಗಿ ಹೆಚ್ಚಿನ ಯಾವ ಮಾಹಿತಿ ಸಿಗದಿದ್ದರೂ ಆತ ಚಿತ್ರಿಸಿರುವ ಅಲ್ಲಮನ ಚರಿತ್ರೆಯನ್ನೇ ಆಧರಿಸಿ ಊಹಿಸುವುದಾದರೆ ಚಾಮರಸನೂ ತನ್ನ ಕಥಾನಾಯಕನಂತೆ ವಿರಕ್ತನೂ, ಸಂಯಮಿಯೂ ಸದಾಜಾರ ಸಂಪನ್ನನೂ ಆಗಿದ್ದನೆಂದು ಊಹಿಸಬಹುದಾಗಿದೆ.
ಹನ್ನೆರಡನೆಯ ಶತಮಾನದಲ್ಲಿ ಮಾನವಕುಲದ ಉದ್ಧಾರಕ್ಕಾಗಿ ನಡೆದ ಶಿವಶರಣರ ಕ್ರಾಂತಿಯಲ್ಲಿ ಅಲ್ಲಮಪ್ರಭು ಜ್ಞಾನನಿಧಿಯಾಗಿ ವೈರಾಗ್ಯ ಮೂರ್ತಿಯಾಗಿ ಕಂಗೊಳಿಸಿದ್ದಾನೆ. ಅಂಧಾಭಿಮಾನಕ್ಕೆ ಒಳಗಾಗದೆ ಸಾಧಕರ ಲೋಪ ದೋಷಗಳ ಮೇಲೆ ಜ್ಞಾನದ ಬೆಳಕನ್ನು ಬೀರಿ ಅವರನ್ನು ಒರೆದು, ಕೆಡೆನುಡಿದು, ದಾರಿ ತೋರಿ ಸಮಸ್ತಜಾತಿಯ ಜಾಲವನ್ನು ಸರ್ವವನ್ನು ಕರುಣಿಸಿ, ಉದ್ಧರಿಸುತ್ತ ಸಾಗಿದ ಈ ಮಹಾತ್ಮನ ದಿವ್ಯ ವ್ಯಕ್ತಿತ್ವವನ್ನು ಈ ಕಾವ್ಯ ಅಪೂರ್ವವಾದ ರೀತಿಯಲ್ಲಿ ಚಿತ್ರಿಸುತ್ತದೆ. ಅಲ್ಲಮ ಪ್ರಭುವಿನ ಚರಿತ್ರೆಯನ್ನು ಮೊಟ್ಟಮೊದಲು ಬರೆದ ಹರಿಹರ ತನ್ನ ಪ್ರಭುದೇವರ ರಗಳೆಯಲ್ಲಿ ಅಲ್ಲಮ ಕಾಮಲತೆಗೆ ಮರುಳಾಗಿ ವಿರಹದಿಂದ ಬೆಂದು ವೈರಾಗ್ಯ ಪಡೆದಂತೆ ಚಿತ್ರಿಸಿದ್ದರೆ ಲಲಿತನಿರ್ಮಲ ಚಂದ್ರಕಾಂತದ ಶಿಲೆಯ ಹತ್ತಿರ ಲತೆಯ ದಾವಾನಳನು ಕೊಳಲಾಜ್ವಾಲೆಯಾ ಶಿಲೆಯೊಳಗೆ ತೋರ್ಪಂತೆ ತಿಳಿಯದಯದ ಜನಕೆ ಮಾಯೆಯ ತಳಿತ ಕಾಮಜ್ವಾಲೆಯಲ್ಲಮನೊಳಗೆ ಪ್ರತಿಬಿಂಬಿಸಿದುದಾತನೆ ಕಾಮಿಯೆಂಬಂತೆ-ಎಂದು ಚಾಮರಸ ಅಲ್ಲಮನ ಗುರುಗುಹೇಶ್ವರ ಸ್ವರೂಪದ ದರ್ಶನ ಮಾಡಿಸಿದ್ದಾನೆ. ತನ್ನ ಕಾವ್ಯಸತ್ತವರ ಕಥೆಯಲ್ಲ ಜನನದ ಕುತ್ತದಲ್ಲಿ ಕುದಿ ಕುದಿದು ಕರ್ಮದ ಕತ್ತಲೆಗೆ ಸಿಲುಕುವರ ಸೀಮೆಯ ಮಾತು ತಾನಲ್ಲ ಎಂದು ಘೋಷಿಸಿ ಸತ್ಯಶರಣರು ತಿಳಿವುದೀ ಪ್ರಭುಲಿಂಗಲೀಲೆಯನು ಎಂದಿರುವುದು ಕವಿಯ ಉದ್ದೇಶಕ್ಕೆ ಸಾಕ್ಷಿ. ಇದು ಪೌರಾಣಿಕ ಸ್ವರೂಪದ ಕಾವ್ಯವಾದರೂ ಸಹಿತ ಅಲ್ಲಮನ ನೈಜ ಚಿತ್ರಣವನ್ನು ಜ್ಞಾನ ಕ್ರಿಯೆ ಬದ್ಧತೆ ಶಿವಯೋಗದ ಬಗ್ಗೆ ಅತ್ಯಂತ ವಿಸ್ತಾರವಾಗಿ ಚಾಮರಸ ಹೇಳುತ್ತಾ ಹೋಗುತ್ತಾನೆ. ಶಿವ ಪಾರ್ವತಿಯರ ಸಂವಾದ , ಮಾಯೆಯ ಹುಟ್ಟು ,ಮಾಯೆ ಮಧುಕನಾಥನ ಪೂಜಿಸಿದ್ದು,ಅಲ್ಲಮ ಪ್ರಭು ಮದ್ದಳೆ ಬಾರಿಸಿದ್ದು, ವಿಮಳೆ ಬಂದಿದ್ದು, ಪ್ರಭು ಮಾಯೆಗೆ ಸಿಕ್ಕದೆ ಹೋಗಿದ್ದು, ಬಸವಾದಿ ಪ್ರಮಥರು ಧರೆಗೆ ಇಳಿದದ್ದು , ಬಸವಾದಿ ಶರಣರ ಜನ್ಮ , ಪ್ರಭುದೇವರ ಕಲ್ಯಾಣಕ್ಕೆ ಆಗಮಿಸಿದ್ದು, ಮುಕ್ತಾಯಕ್ಕ ಗೋರಕ್ಷಕ ಅಕ್ಕ ಮಹಾದೇವಿ, ಗೊಗ್ಗಯ್ಯ,ಸಿದ್ಧರಾಮ ,ಮರುಳಶಂಕರದೇವರು, ಬಸವಣ್ಣ ಶೂನ್ಯ ಪೀಠ ರಚಿಸಿದ್ದು, ಪ್ರಭುದೇವರು ಶೂನ್ಯ ಪೀಠವನ್ನು ಏರಿದ್ದು, ಪ್ರಭುದೇವರ ಆರೋಗಣೆ ಮಾಡಿದು ಹಗೆ ಹತ್ತು ಹಲವು ಸಂಗತಿಗಳನ್ನು ಪವಾಡ ಸಾದೃಶ್ಯ ಚಿತ್ರಿಸುವಲ್ಲಿ ಚಾಮರಸನು ಅತ್ಯಂತ ಯಶಸ್ವಿಯಾದನು. ಮಲಯಜದ ಮರ ಗಾಳಿ ಸೋಂಕಿನಲುಳಿದ ಮರ ಪರಿಮಳಿಸುವಂತೆ ಅಲ್ಲಮನ ದಿವ್ಯ ಸಂಪರ್ಕದಿಂದ ಬಸವಣ್ಣ, ಸಿದ್ಧರಾಮ, ಗೊಗ್ಗಯ್ಯ, ಗೋರಕ್ಷ, ಮಾಯಾದೇವಿ, ಮಹಾದೇವಿಯಕ್ಕ, ಮುಕ್ತಾಯಕ್ಕ ಮೊದಲಾದವರು ಕಣ್ಗೆಸೆದರೂ ಆಯಾ ಪಾತ್ರವೃಕ್ಷಗಳು ತಮ್ಮ ಸತ್ತ್ವದಿಂದಲೇ ಬೆಳೆದು, ತಂತಮ್ಮ ನೆಲೆಯಲ್ಲಿ ನಿಂತು ಅಲ್ಲಮನ ಪಾದಕ್ಕೆ ಬಾಗಿ ಹೂ ಬಿಟ್ಟಿವೆ. ಒಂದು ದೃಷ್ಟಿಯಿಂದ ಪಾರ್ವತಿಯ ತಾಮಸಕಳೆಯಾಗಿ ಬಂದ ಮಾಯೆ ಅವಳಿಗೆ ತಿಳಿವನ್ನು ಕೊಟ್ಟ ವಿಮಳೆ, ಸಾತ್ತ್ವಿಕ ಕಳೆಯಾಗಿ ಬಂದ ಅಕ್ಕಮಹಾದೇವಿ, ಸುಜ್ಞಾನಿ ನಿರಹಂಕಾರರ ಮಗನಾಗಿ ಹುಟ್ಟಿದ ಅಲ್ಲಮ-ಈ ಮುಂತಾದ ಕಥಾರಚನೆಯಲ್ಲಿ ಆಧ್ಯಾತ್ಮಿಕವಾದ ಸಾಂಕೇತಿಕ ಧ್ವನಿಯ ಏಕತೆ ಕಾಣುತ್ತದೆ.ಶಿವನ ನಟ ನಾಟಕದ ಮಹಿಮೆಯನ್ನು ತೆರೆದು ತೋರಿಸುವ ಈ ಕಾವ್ಯದಲ್ಲಿ ಎಲ್ಲ ಪಾತ್ರಗಳೂ ಜೀವಕಳೆಯಿಂದ ಕೂಡಿ ಶಿವಕಳೆಯನ್ನು ಬೆಳಗುತ್ತವೆ.
ತಿಳಿಗನ್ನಡದ ತುಂಬಿದ ತೊರೆಯಂತೆ ನಿರರ್ಗಳವಾಗಿ ಹರಿಯುವ ಚಾಮರಸನ ಭಾಮಿನೀ ಷಟ್ಟದಿಯ ಶೈಲಿಯನ್ನು ಕುಮಾರವ್ಯಾಸನೊಡನೆ ಹೋಲಿಸಬಹುದಾದರೂ ಇವನ ಭಾಷೆ ನಯಗಾರಿಕೆಯಿಂದ ಕೂಡಿದೆ. ಆ ಕಾಲದ ಶಿವಶರಣರ ವಚನಗಳನ್ನು ಕವಿ ಚೆನ್ನಾಗಿ ಅಭ್ಯಾಸಮಾಡಿದ್ದ ಎಂಬುದಕ್ಕೆ ಇವನ ವಾಣಿ ಸಾಕ್ಷಿ ಹೇಳುತ್ತದೆ. ಭಾವ ಭಾಷೆಗಳಲ್ಲಿನ ಅಪೂರ್ವವಾದ ಹೊಂದಾಣಿಕೆಯಿಂದಲೂ ಉಜ್ಜ್ವಲವಾದ ಉಪಮೆ ರೂಪಕ ದೃಷ್ಟಾಂತಗಳಿಂದಲೂ ಸಮಯೋಚಿತವಾದ ವರ್ಣನೆ ಮತ್ತು ದೇಶೀಯ ಬೆಡಗಿನ ಪರಿಣಾಮದ ಉತ್ಕಟತೆಯಿಂದಲೂ ಇವನ ಶೈಲಿ ಇವನ ಸ್ವತಂತ್ರ ಕವಿತಾಮಾರ್ಗದ ಮುಖಬಿಂಬದಂತಿದೆ.
ಇದರಿಂದ ಲಿಂಗಾಯತ ತತ್ವ ಪರಿಪಾಲಕ ಪ್ರೌಢದೇವರಾಯನು ಚಾಮರಸನು ಬರೆದ ಪ್ರಭುಲಿಂಗ ಲೀಲೆಯ ಕೃತಿಯನ್ನು ಹೊನ್ನಿನ ಹೂವಿನಿಂದ ಪೂಜಿಸಿ ಗೌರವಿಸಿ ಮುಂದೆ ಚಾಮರಸನನ್ನು ಮಂತ್ರಿಯನ್ನಾಗಿ ಮಾಡಿದ್ದನು ನಾವು ಕೇಳಿದ್ದೇವೆ.
ಚಾಮರಸ ಮತ್ತು ಕುಮಾರವ್ಯಾಸ ಇಬ್ಬರೂ ಸ್ನೇಹಿತರು ಆತ್ಮೀಯರು ನೆಂಟರೂ ಕೂಡ ಹೌದು ,ಆದರೆ ಕುಮಾರ ವ್ಯಾಸ ವೈದಿಕ ವ್ಯವಸ್ಥೆಯ ಮಹಾ ಭಾರತವನ್ನು ತನ್ನ ಕಾವ್ಯ ವಸ್ತುವನ್ನಾಗಿ ಇಟ್ಟುಕೊಂಡು ಮಹಾಕಾವ್ಯ ರಚಿಸಿ ಪೌರಾಣಿಕ ಕಥೆಗಳನ್ನು ತನ್ನ ಭಾಮಿನಿ ಷಟ್ಪದಿಯಲ್ಲಿ ಸೊಗಸಾಗಿ ಚಿತ್ರಿಸಿದ್ದಾನೆ ,ಇದಕ್ಕೆ ವ್ಯತಿರಿಕ್ತವಾಗಿ ಚಾಮರಸನು ಅಲ್ಲಮನಂತಹ ಜಗತ್ತಿನ ಶ್ರೇಷ್ಠ ಜ್ಞಾನಿಯನ್ನು ದಾರ್ಶನಿಕನನ್ನು ತನ್ನ ಕಾವ್ಯದ ಮುಖ್ಯ ಕಾವ್ಯದ ವಸ್ತುವಾಗಿ ಸ್ವೀಕರಿಸಿ ಅದೇ ಭಾಮಿನಿ ಶೈಲಿಯಲ್ಲಿ ಅತ್ಯಂತ ಸುಂದರವಾಗಿ ಪ್ರಭುಲಿಂಗ ಲೀಲೆಯನ್ನು ರಚಿಸಿದನು. ಇದು ಒಂದು ರೀತಿಯಲ್ಲಿ ಕುಮಾರವ್ಯಾಸನ ಕಾವ್ಯಕ್ಕೆ ತನ್ನ ಕಾವ್ಯ ಎದಿರೇಟು ಎಂಬ ಅರ್ಥದಲ್ಲಿ ಬರೆದನು. ನಾನು ಇಂತಹ ಒಂದು ನಿರ್ಧಾರಕ್ಕೆ ಬರಲು ಮುಖ್ಯ ಕಾರಣ
ಚಾಮರಸನು ಆರಂಭದಲ್ಲಿಯೇ ಬರೆದ ಸತ್ತವರ ಕಥೆಯಲ್ಲ ಎಂಬ ಪ್ರಸ್ತಾವನೆ.
ಅರಸನ ಆಸ್ಥಾನವನ್ನು ಮತ್ತು ಭಾರತ ಕಥಾ ಮಂಜರಿಯನ್ನು ನೇರವಾಗಿ ವಿಡಂಬಿಸುವ ಟೀಕಿಸುವ ಗಟ್ಟಿತನ ಚಾಮರಸನು ಮಾಡಿದ್ದಾನಲ್ಲದೆ ಅದಕ್ಕೆ ಪರ್ಯಾಯವಾಗಿ ಸತ್ಯದ ಪರಿಚಯ ಮಾಡಿಕೊಟ್ಟಿದ್ದಾನೆ. ಹೊತ್ತು ಹೋಗದೆ ಆಸ್ಥಾನದಲ್ಲಿ ಮಂದ ಮತಿಗಳು ಪುಂಡರು ಆಲಿಪ ವ್ಯರ್ಥವಾಗಿ ಸಮಯ ಶಕ್ತಿ ಹರಣ ಮಾಡುವವರ ಗೋಷ್ಠಿಯಲ್ಲಿ ಇಂದು ನಾನು ಸತ್ಯ ಶರಣರ ಅಲ್ಲಮಪ್ರಭುಗಳ ಜೀವನ ಚರಿತ್ರೆಯನ್ನು ಹೇಳುವೆನು ಎಂದು ತನ್ನ ಕಾವ್ಯ ಸಾಮರ್ಥ್ಯದ ಗಟ್ಟಿತನ ಪ್ರದರ್ಶಿಸಿದ್ದಾನೆ. ಇದು ನಿಜಕ್ಕೂ ಶರಣರ ಚರಿತ್ರೆ ತಿಳಿಯಲು ಅತ್ಯಂತ ಆರೋಗ್ಯಕರ ಆಕರ.
ಚಾಮರಸನ ಪ್ರಭುಲಿಂಗಲೀಲೆ ಸಂಸ್ಕೃತ, ತಮಿಳು, ತೆಲುಗು ಹಾಗೂ ಮರಾಠಿ ಭಾಷೆಗಳಿಗೆ ಪರಿವರ್ತನ ಹೊಂದಿದ ಕೀರ್ತಿ ಪಡೆದ ಏಕಮಾತ್ರ ಕನ್ನಡ ಕಾವ್ಯವಾಗಿದೆ.
ಆಕರ ಗ್ರಂಥ
ಚಾಮರಸನ ಪ್ರಭುಲಿಂಗ ಲೀಲೆಯ ಗದ್ಯಾನುವಾದ – ಡಾ ಎಸ್ ವಿದ್ಯಾಶಂಕರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ

ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಬಹುವಾರ್ಷಿಕ ಬೆಳೆಗೆ ರೂ.೨ಲಕ್ಷ ಪರಿಹಾರಕ್ಕೆ ರೈತ ಸಂಘ ಆಗ್ರಹ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಡಿಸಿ ಭರವಸೆ: ಆಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ಬಿಜೆಪಿ
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ :ಪ್ರೊ.ಲಕ್ಷ್ಮಿದೇವಿ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರದಲ್ಲಿ ರಾಜ್ಯ ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಬಹುವಾರ್ಷಿಕ ಬೆಳೆಗೆ ರೂ.೨ಲಕ್ಷ ಪರಿಹಾರಕ್ಕೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಇಂದು ಸಿಂದಗಿಯಲ್ಲಿ ಆರೆಸ್ಸೆಸ್ ಪಥ ಸಂಚಲನ
    In (ರಾಜ್ಯ ) ಜಿಲ್ಲೆ
  • ಇಂದು ಸಿಂದಗಿಯಲ್ಲಿ ಆರೆಸ್ಸೆಸ್ ಪಥ ಸಂಚಲನ
    In (ರಾಜ್ಯ ) ಜಿಲ್ಲೆ
  • ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಜಾನಪದ ಜಗತ್ತಿನ ಜಟ್ಟಿ ಬೆಟಗೇರಿ ಕೃಷ್ಣ ಶರ್ಮ :ಡಾ.ಮಾಗಣಗೇರಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಬಂದ್‌ಗೆ ಉಮೇಶ ಕಾರಜೋಳ ಆಕ್ಷೇಪ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಾಯಕರು ಕೂಡಲೇ ಕನೇರಿ ಶ್ರೀಗಳ ಕ್ಷಮೆ ಕೇಳಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.