ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಎಸ್ಡಿಪಿ 2022-23 ನೇ ಸಾಲಿನ ಸುಮಾರು 1 ಕೋಟಿ 20 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ನಿರ್ಮಿಸಿದ ನೂತನ ಸಭಾಂಗಣ ಮತ್ತು ಗ್ರಂಥಾಲಯ ಕಟ್ಟಡ, ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಶರಣಬಸಪ್ಪಗೌಡ ದರ್ಶನಪುರವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು. ಕಾಲೇಜಿನ ಪ್ರಾಯೋಗಿಕ ಕೋಣೆಗಳ ನಿರ್ಮಾಣಕ್ಕೆ, 2023-24 ನೇ ಸಾಲಿನಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ ಇಲಾಖೆ, ಸುಮಾರು 1 ಕೋಟಿ 56 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಪ್ರಾಯೋಗಿಕ ಕೋಣೆಗಳ ಅಡಿಗಲ್ಲು ಹಾಗೂ ನೂತನ ಸಭಾಂಗಣ ಮತ್ತು ಗ್ರಂಥಾಲಯ ಕಟ್ಟಡದ ಉದ್ಘಾಟನೆಯನ್ನು, 15/09/2025 ರಂದು ಸೋಮವಾರ ನೆರವೇರಿಸುವುದಾಗಿ ತಿಳಿಸಿದರು, ಈಗಾಗಲೇ ಪಟ್ಟಣದ ಅಭಿವೃದ್ಧಿಗೆ 4 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದ್ದು, ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದರು.
ಈ ವೇಳೆ ಕಾಲೇಜು ಕಟ್ಟಡದ ಭೂದಾನಿಗಳು ಹಾಗೂ ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ, ಶಹಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತ ಸಾಹು ಚಂದಲಾಪುರ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ಪುರಸಭೆ ಅಧ್ಯಕ್ಷ ರಹಿಮಾನ್ ಪಟೇಲ್ ಯಲ್ಗೋಡ್, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಂಬಾರ, ಖಾಜಾ ಪಟೇಲ್ ಕಾಚೂರು, ಯುವ ನಾಯಕ ಆದಿತ್ಯ ಪೋಲೀಸ್ ಪಾಟೀಲ್, ಪ್ರಾಂಶುಪಾಲ ಪ್ರೊ ನಾಗಪ್ಪ ಚಾವಲ್ಕರ್, ಡಾ ಯಂಕನಗೌಡ ಪಾಟೀಲ್ ಮಾಲಹಳ್ಳಿ, ಪರತರಡ್ಡಿ ಮೇಟಿ ಪಾಟೀಲ, ಆನಂದ ವಜ್ಜಲ್, ಶಿವಶಂಕರ ಖಾನಾಪುರ, ಸೋಮಲಿಂಗಪ್ಪ ದೊಡ್ಮನಿ, ಪುರಸಭೆ ಸದಸ್ಯರು, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.