ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಹಾಗೂ ಬಿ.ಎಲ್.ಡಿ.ಇಯ ಶ್ರೀ ಬಿ.ಎಮ್. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯ ವಿಜಯಪುರ ಇವರ ಸಹಯೋಗದಲ್ಲಿ ಬುಧವಾರ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನ ಅಂಗವಾಗಿ ಜನಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಅಧ್ಯಕ್ಷರಾದ ಹರೀಶ.ಎ ಅವರು ಹಸಿರು ನಿಶಾನೆ ತೊರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಅಧ್ಯಕ್ಷರಾದ ಹರೀಶ.ಎ ಅವರು, ಮಾನಸಿಕ ಆರೋಗ್ಯದ ಕುರಿತು ಸಮುದಾಯದಲ್ಲಿ ತಿಳುವಳಿಕೆ ಮೂಡಿಸಬೇಕು ಶಾಲಾ-ಕಾಲೇಜುಗಳಲ್ಲಿ ಹಾಗೂ ಕೆಲಸದ ಸ್ಥಳದಲ್ಲಿ ಜಾಗೃತಿ ಶಿಬಿರ ಆಯೋಜಿಸಿ ಮಾನಸಿಕ ಸ್ವಾಸ್ಥ್ಯದ ಕುರಿತು ತಿಳಿ ಹೇಳಬೇಕು. ವಿದ್ಯಾರ್ಥಿಗಳು ಓದಿನೆಡೆಗೆ ಒಲವು ಹೊಂದಿ ಜೀವನ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು.ಸೃಜನಾತ್ಮಕ ಹವ್ಯಾಸ ಹೊಂದಬೇಕು ಎಂದು ಅವರು ಹೇಳಿದರು.
ಮನೋರೋಗ ತಜ್ಞ ಡಾ.ಮಂಜುನಾಥ ಮಸಳಿ ಅವರು ಮಾತನಾಡಿ, ಮಾನಸಿಕ ಕಷ್ಟದಲ್ಲಿ ಇರುವವರನ್ನು ಸಾಂತ್ವನದಿಂದ ಮಾತನಾಡಿಸಿ, ಮಾನಸಿಕ ಒತ್ತಡ ಅನ್ನಿಸಿದಾಗ ಆಪ್ತ ಸಮಾಲೋಚನೆ ಮಾಡಬೇಕು. ಉಚಿತ ಮಾನಸಿಕ ಸಹಾಯವಾಣಿ, ಟೆಲಿ ಮನಸ್- ೧೪೪೧೬ ಕರೆ ಮಾಡಿ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್ ಎ ಮೋಹನ, ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್ ಹಾಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ತ ಗುಣಾರಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಅರ್ಚನಾ ಕುಲಕರ್ಣಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ. ಜಾನ್ ಕಟವಟೆ, ತಾಲೂಕಾ ಆರೋಗ್ಯಾಧಿಕಾರಿ ಡಾ. ಕೆ ಡಿ ಗುಂಡಬಾವಡಿ, ಮಾನಸಿಕ ರೋಗ ಶಾಸ್ತ್ರದ ವಿಭಾಗ ಮುಖ್ಯಸ್ಥರಾದ ನಜೀರ ಬಳಗಾರ, ಡಾ.ಅಪ್ಪನಗೌಡ ಪಾಟೀಲ್, ಡಾ.ಅಮಿತಾಕುಮಾರ ಬಿರಾದಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ ಎಮ್ ಕೋಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ದಶವಂತ, ಕ್ಷೇತ್ರ ಆರೋಆರೋಗ್ಯಾಧಿಕಾರಿ ಎನ್ ಆರ್ ಬಾಗವಾನ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕದ ಸಿಬ್ಬಂದಿ ವರ್ಗದವರು, ಬಿ.ಎಲ್.ಡಿ.ಇಯ ಶ್ರೀ ಬಿ.ಎಮ್.ಪಾಟೀಲ ನರ್ಸಿಂಗ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.