Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿದ್ದು ಸರ್ಕಾರದ ವಿರುದ್ಧ ಎಸ್.ಸಿ ಒಳಮೀಸಲಾತಿ ಕಿಚ್ಚು!
(ರಾಜ್ಯ ) ಜಿಲ್ಲೆ

ಸಿದ್ದು ಸರ್ಕಾರದ ವಿರುದ್ಧ ಎಸ್.ಸಿ ಒಳಮೀಸಲಾತಿ ಕಿಚ್ಚು!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಫ್ರೀಡಂಪಾರ್ಕ್‌ನಲ್ಲಿ ಸ್ಪೃಶ್ಯ ಸಮುದಾಯದಿಂದ ಉಗ್ರ ಹೋರಾಟ | ಆತ್ಮಹತ್ಯೆಗೆ ಮಹಿಳೆ ಯತ್ನ!

ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸ್ಪೃಶ್ಯ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್​ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಸ್ಪೃಶ್ಯ ಜಾತಿಗಳಾದ ಬಂಜಾರ, ಬೋವಿ, ಕೊರಮ, ಕೊರಚ ಜಾತಿಗಳನ್ನು C ವರ್ಗಕ್ಕೆ ಸೇರ್ಪಡೆ ಮಾಡಿ ಶೇ.5 ರಷ್ಟು ಮೀಸಲಾತಿ ನೀಡಲಾಗಿದೆ. ಆದರೇ, ಹೀಗೆ ಮೀಸಲಾತಿ ಹಂಚಿಕೆ ಮಾಡಿದ್ದರಿಂದ ಸ್ಪೃಶ್ಯ ಜಾತಿಗಳಿಗೆ ಅನ್ಯಾಯ ಆಗಿದೆ ಎಂದು ಇಂದು ಸ್ಪೃಶ್ಯ ಜಾತಿಗಳ ಜನರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ರೊಚ್ಚಿಗೆದ್ದ ಪ್ರತಿಭಟನೆಕಾರರು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಹಿಳೆಯೊಬ್ಬರು ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇನ್ನು ಮಹಾರಾಣಿ ಕಾಲೇಜು ಬಳಿ ಪ್ರತಿಭಟನಾಕಾರರು ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆ ತಡೆಯಿಂದಾಗಿ ಕೆ.ಆರ್.ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಕಿಲೋ ಮೀಟರ್ ಉದ್ದ ನಿಂತಲ್ಲೇ ನಿಂತುಕೊಂಡಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.
ಎಡಗೈ ಸಮುದಾಯಕ್ಕೆ ಶೇ. 6 ರಷ್ಟು, ಬಲ ಸಮುದಾಯಕ್ಕೆ ಶೇ. 6 ರಷ್ಟು ಹಾಗೂ ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 20ರಂದು ವಿಧಾನಸೌಧದಲ್ಲಿ ಘೋಷಿಸಿದ್ದರು. ನ್ಯಾ.ನಾಗಮೋಹನ್‌ ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು, ಈ ಮೂಲಕ ದಶಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದು ಸಿಎಂ ತಿಳಿಸಿದರು. ಆದರೆ ಒಳಮೀಸಲಾಯಿಯಿಂದ ನಮಗೆ ಅನ್ಯಾಯವಾಗುತ್ತದೆ ಎಂದು ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಿಸಿ, ಲಭ್ಯ ಶೇಕಡಾ 17 ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ ಮಾನದಂಡಗಳ ಅನ್ವಯ ಹಂಚಿಕೆ ಮಾಡುವಂತೆ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಏಕಸದಸ್ಯ ಆಯೋಗ, ಆರು ಶಿಫಾರಸುಗಳನ್ನೂ ಮಾಡಿತ್ತು. ಅಲ್ಲದೆ ಆಯೋಗವು ಸುಮಾರು 1,765 ಪುಟಗಳ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.