ಉದಯರಶ್ಮಿ ದಿನಪತ್ರಿಕೆ
ಚಡಚಣ: ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸಿ ಎಂದು ಶಿಕ್ಷಕರಿಗೆ ಕರೆಕೊಟ್ಟ ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ ಅವರು ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ, ಸುಸಂಸ್ಕೃತರನ್ನಾಗಿ, ಒಳ್ಳೆಯ ಸತ್ಪçಜೆಗಳನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ ಆಗಬೇಕು ಎಂದು ಹೇಳಿದರು.
ಪಟ್ಟಣದ ಗುರುಕೃಪಾ ಮಂಗಲ ಕಾರ್ಯಾಲಯದಲ್ಲಿ ತಾಲೂಕ ಆಡಳಿತ ವತಿಯಿಂದ ಮಂಗಳವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಾಷ್ಟ್ರಪತಿಯಿಂದ ಹಿಡಿದು ರೈತರವರೆಗೆ ಮತ್ತು ಇಡೀ ಮನುಕುಲವನ್ನು ನಿರ್ಮಿಸುವವನು ಶಿಕ್ಷಕ.
ಪ್ರಾಚೀನ ಕಾಲದಿಂದ ಗುರುಗಳನ್ನು ದೇವರ ರೂಪದಲ್ಲಿ ಪೂಜಿಸುತ್ತ ಬಂದಿರುವರು, ಶ್ರೇಷ್ಠ ಗುರು ಪರಂಪರೆ ಹೊಂದಿರುವ ದೇಶ ಭಾರತ. ನಳಂದ ಹಾಗೂ ತಕ್ಷಶಿಲಾ ವಿಶ್ವವಿದ್ಯಾಲಯಗಳು ಶ್ರೇಷ್ಠ ವಿದ್ಯೆ ನೀಡುವ ಗುರು ಪರಂಪರೆ ಹೊಂದಿರುವ ವಿದ್ಯಾ ಮಂದಿರಗಳು ಇವತ್ತಿಗು ಇವೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಎಸ್ ಎಸ್ ಪಾಟೀಲ ಮಾತನಾಡಿದರು.
ದಿವ್ಯ ಸಾನಿದ್ಯ ವಹಿಸಿದ ಅಮೃತಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಜಗತ್ತಿನ ಯಾವ ಅಧಿಕಾರಿಗಳಿಗೂ ಸಹ ಬ್ರಹ್ಮ ವಿಷ್ಣು ಮಹೇಶ್ವರ ಎಂದು ಕರೆದಿಲ್ಲ ಆದರೆ ಗುರುವಿಗೆ ಮಾತ್ರ ಗುರು ಬ್ರಹ್ಮ ಗುರು ವಿಷ್ಣು ಗುರುದೇವೋ ಮಹೇಶ್ವರ ಎಂದು ಕರೆಯಲಾಗಿದೆ. ಗುರುವಿನ ಸ್ಥಾನ ಎಲ್ಲಕ್ಕಿಂತಲೂ ಮಿಗಿಲಾದಿದ್ದು ಎಂದರು.
ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಿದಾನಂದ ಕಟ್ಟಿಮನಿ ಪ್ರಾಸ್ತವಿಕವಾಗಿ ಮಾತನಾಡಿದರು.
ತಾಲೂಕಾಡಳಿತ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಸನ್ಮಾನಿಸಲಾಯಿತು. ೨೦೨೫ ರಲ್ಲಿ ನಿವೃತ್ತಿ ಹೊಂದಿದ ತಾಲೂಕಿನ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕಿನ ಸರಕಾರಿ ನೌಕರರ ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ ಎಸ್ ಸೋನಗಿ, ಉಪಾಧ್ಯಕ್ಷ ಎಸ್ ಜೆ ಪಾಟೀಲ, ಅನುದಾನ ರಹಿತ ಶಿಕ್ಷಣ ಸಂಸ್ಥೆ ಒಕ್ಕೂಟದ ಅಧ್ಯಕ್ಷ,ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ,ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ ಎಸ್ ಕರಜಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹಾಗೂ ಚಡಚಣ ತಾಲೂಕಿನ ಎಲ್ಲ ಸರಕಾರಿ ಹಾಗೂ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಭಾಗವಹಿಸಿದ್ದರು.